



ನವದೆಹಲಿ: ಸರ್ಕಾರದ ಹಿಡಿತದಿಂದ ಟಾಟಾ ತೆಕ್ಕೆಗೆ ಹೋದರೂ ಏರ್ ಇಂಡಿಯಾಕ್ಕೆ ಸಂಕಷ್ಟ ಮುಗಿದಂತೆ ಕಾಣುತ್ತಿಲ್ಲ. ಇದೀಗ ಪ್ರಯಾಣಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಸಂಬಂಧ ಮಾನದಂಡಗಳನ್ನು ಅನುಸರಿಸದ ಏರ್ ಇಂಡಿಯಾಕ್ಕೆ ವಿಮಾನಯಾನ ವಲಯದ ನಿಯಂತ್ರಕ (ಡಿಜಿಸಿಎ) 10 ಲಕ್ಷ ರೂಪಾಯಿ ದಂಡ ವಿಧಿಸಿದೆ. ದೆಹಲಿ, ಕೊಚ್ಚಿ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಲ್ಲಿನ ಏರ್ ಇಂಡಿಯಾ ಘಟಕಗಳನ್ನು ಪರಿಶೀಲಿಸಿದ ನಂತರ, ವಿಮಾನಯಾನ ಸಂಸ್ಥೆಯು ನಾಗರಿಕ ವಿಮಾನಯಾನ ನಿಬಂಧನೆಗಳನ್ನು (ಸಿಎಆರ್) ಸರಿಯಾಗಿ ಅನುಸರಿಸುತ್ತಿಲ್ಲ ಎಂದು ಕಂಡುಬಂದಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಹೇಳಿಕೆಯಲ್ಲಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 3ರಂದು ನಿಯಂತ್ರಕದಿಂದ ಏರ್ ಇಂಡಿಯಾಗೆ ಶೋಕಾಸ್ ನೋಟಿಸ್ ಕೂಡ ಜಾರಿ ಮಾಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.