



ಮಂಗಳೂರು: ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್‌ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಮಂಗಳೂರು ಪೊಲೀಸರು ಗುರುವಾರ ದಾಳಿ ನಡೆಸಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ. 100 ಕೆಜಿ ಮಾದಕದ್ರವ್ಯ ಮಿಶ್ರಿತ ಚಾಕೊಲೇಟ್ ವಶಪಡಿಸಿಕೊಂಡಿದ್ದಾರೆ.
ಮಂಗಳೂರಿನ ಪಾಂಡೇಶ್ವರ ಪೊಲೀಸರು ನಗರದ ಕಾರ್ ಸ್ಟ್ರೀಟ್’ನಲ್ಲಿರುವ ಮನೋಹರ್ ಶೇಟ್ ಮಾಲೀಕತ್ವದ ಅಂಗಡಿ ಮತ್ತು ಉತ್ತರ ಪ್ರದೇಶ ಮೂಲದ ಬೆಚನ್ ಸೋಂಕರ್ ನಡೆಸುತ್ತಿದ್ದ ಫಳ್ನೀರ್‌ನಲ್ಲಿರುವ ಮತ್ತೊಂದು ಸಣ್ಣ ಅಂಗಡಿ ಮೇಲೆ ದಾಳಿ ನಡೆಸಿದ್ದಾರೆ.
ಆರೋಪಿಗಳಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಚಾಕೊಲೇಟ್ನಲ್ಲಿ ಯಾವ ಮಾದರಿಯ ಮಾದಕದ್ರವ್ಯ ಬೆರೆಸಲಾಗಿದೆ ಎಂಬುದನ್ನು ತಿಳಿಯಲು ಅವುಗಳನ್ನು ಹೆಚ್ಚಿನ ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು. ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಆಧರಿಸಿ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.
ಮಹಾಶಕ್ತಿ ಮುನಕ್ಕ, ಬಂ ಬಂ ಮುನಕ್ಕ ವಟಿ, ಪವರ್ ಮುನಕ್ಕ ವಟಿ ಹಾಗೂ ಆನಂದ ಚೂರ್ಣ ಎಂಬ ಹೆಸರುಗಳ ಲೇಬಲ್ ಅಂಟಿಸಿದ್ದ ಪೊಟ್ಟಣಗಳಲ್ಲಿ ಚಾಕೊಲೇಟ್ ಮಾರಾಟ ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.