



ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ* ಹೆಬ್ರಿ ತಾಲೂಕು ಘಟಕ
109 ನೇ ಸಂಸ್ಥಾಪನಾ ದಿನಾಚರಣೆ ಮತ್ತು ದತ್ತಿ ಉಪನ್ಯಾಸ ಕಾರ್ಯಕ್ರಮ ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿ ಇಲ್ಲಿ ನಡೆಯಿತು. 109 ನೇ ಸಂಸ್ಥಾಪನಾ ದಿನಾಚರಣೆ ಮತ್ತು ದತ್ತಿ ಉಪನ್ಯಾಸ ಕಾರ್ಯಕ್ರಮಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿ ಇಲ್ಲಿ ನಡೆಯಿತು.
ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಆಶಾಲತಾ ಮೇಡಂ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು..ಭುವನೇಶ್ವರಿ ದೇವಿಗೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.. ಕನ್ನಡ ನಮ್ಮ ಮನೆ ಮನಗಳಲ್ಲಿರಬೇಕು ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ.ಸಾ.ಪ ಹೆಬ್ರಿ ತಾಲೂಕು ಅಧ್ಯಕ್ಷರಾದ ಶ್ರೀನಿವಾಸ ಭಂಡಾರಿ ವಹಿಸಿದ್ದರು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ದ ಅಧ್ಯಕ್ಷರಾದ ಹರೀಶ್ ಪೂಜಾರಿ ಮುಖ್ಯ ಅಭ್ಯಾಗತರಾಗಿದ್ದರು.
"ಕನ್ನಡ ಅಸ್ಮಿತೆ - ಕನ್ನಡ ಸಾಹಿತ್ಯ ಪರಿಷತ್ತು" ವಿಷಯದ ಬಗ್ಗೆ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಭಾಷಾ ಶಿಕ್ಷಕರಾದ ಮಂಜುನಾಥ .ಕೆ. ಶಿವಪುರ ಇವರು ಉಪನ್ಯಾಸ ನೀಡಿದರು. ಇವರು ಕನ್ನಡ ಸಾಹಿತ್ಯ ಪರಿಷತ್ತು ನೆಲ,ಜಲ,ಸಂಸ್ಕ್ರತಿ, ಪುಸ್ತಕ ಪ್ರಕಟಣೆ, ಸಾಹಿತ್ಯಿಕವಾಗಿ ನಿರಂತರವಾಗಿ ಕೆಲಸ ಮಾಡಿಕೊಂಡು ಬರುತ್ತಾ ಇದೆ. ಕನ್ನಡ ಅಸ್ಮಿತೆ ಎಂಬುದು ನಾವು ನಮ್ಮ ಭಾಷೆ, ಸಂಸ್ಕೃತಿ, ಆಚರಣೆ ಕುರಿತು ಹೊಂದಿರುವ ಭಾವನಾತ್ಮಕ ಸಂಬಂಧವನ್ನು ಸೂಚಿಸುತ್ತದೆ ಎಂದು ಹೇಳಿದರು.
ಕಿದಿಯೂರು ಗುರುರಾಜ ಭಾಗವತ ಮತ್ತು ಶಾಂತ.ಜಿ.ಭಾಗವತ ದತ್ತಿ ಉಪನ್ಯಾಸ " ಆರೋಗ್ಯ ಮತ್ತು ಅರ್ಯುವೇದ" ಎನ್ನುವ ವಿಷಯದ ಬಗ್ಗೆ ಡಾ.ಸುರೇಶ ಭಟ್ ತಜ್ಞ ಆರ್ಯುವೇದ ವೈದ್ಯರು ಆರ್ಯುಭೂಮಿ ಹೆಲ್ತ್ ಕೇರ್ ಕ್ಲಿನಿಕ್ ಸಂತೆಕಟ್ಟೆ ಇವರು ಉಪನ್ಯಾಸ ಕೊಟ್ಟರು. ದಿನನಿತ್ಯ ಮನೆಯಲ್ಲೆ ಮಾಡಿದ ಆಹಾರ ಸೇವಿಸುವುದರಿಂದ ನಮ್ಮ ಆರೋಗ್ಯ ಕಾಪಾಡಿಕೊಳ್ಳಬಹುದು. ಭಾರತ ದೇಶವು ಆರ್ಯುವೇದದಲ್ಲಿ ಪ್ರಗತಿಯಲ್ಲಿದ್ದು ವಿದೇಶದವರು ಇದನ್ನು ಅನುಸರಿಸುತ್ತಿದ್ದಾರೆ. ಎಂದರು. ಅಂಬಲಪಾಡಿ ಜಾನಕಿ ವ್ಯಾಸ ಬಲ್ಲಾಳ ದತ್ತಿ ಉಪನ್ಯಾಸ "ಆ.ಪೊಳಲಿ ಭಾಲಕೃಷ್ಣ ಶೆಟ್ಟಿ " ಎನ್ನುವ ವಿಷಯದ ಕುರಿತು ಉಪನ್ಯಾಸವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿ ಇಲ್ಲಿಯ ಉಪನ್ಯಾಸಕರಾದ ಡಾ.ಪ್ರವೀಣ ಕುಮಾರ್ ಎಸ್ ನೀಡಿದರು.
ಈ ಸಂದರ್ಭದಲ್ಲಿ ಕ.ಸಾ.ಪ ಪದಾಧಿಕಾರಿಗಳಾದ ವೀಣಾ ಭಟ್, ಪುಷ್ಪಾವತಿ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಗೌರವ ಕಾರ್ಯದರ್ಶಿ ಡಾ.ಪ್ರವೀಣ್ ಕುಮಾರ್ ಎಸ್ ಪ್ರಸ್ತಾವಿಕ ಮಾತನಾಡಿ ಸ್ವಾಗತಿದರು. ಹರೀಶ್ ಪೂಜಾರಿ ವಂದಿಸಿದರು. ದ್ವಿತೀಯ ಬಿ.ಕಾಂ ವಿದ್ಯಾರ್ಥಿ ವಂದನಾ ನಿರೂಪಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.