



ನವದೆಹಲಿ: ಜಾರ್ಖಂಡ್‌ನ ಇರ್ಫಾನ್ ಭಾಟಿ ಅವರು ಸರ್ಚ್ ಇಂಜಿನ್ ದೈತ್ಯ ಗೂಗಲ್‌ನ ಲಂಡನ್ ಕಚೇರಿಯಿಂದ 1.2 ಕೋಟಿ ರೂ. ಪ್ಯಾಕೇಜ್ ಪಡೆಯುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.
ಇರ್ಫಾನ್ ಭಾಟಿ ಅವರು ಟೆಕ್ ದೈತ್ಯ ಗೂಗಲ್ ನ ಲಂಡನ್ ಕಛೇರಿಯಲ್ಲಿರುವ ಸಂಶೋಧನಾ ತಂಡವನ್ನು ಸೇರಿಕೊಳ್ಳಲಿದ್ದಾರೆ. ಆಗಸ್ಟ್ 29 ರಿಂದ ಕಂಪನಿಯನ್ನು ಸೇರುವ ಸಾಧ್ಯತೆಯಿದೆ. ಇರ್ಫಾನ್ ಭಾಟಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ಗೂಗಲ್ ಇಂಡಿಯಾದಲ್ಲಿ ಕೆಲಸ ಮಾಡುತ್ತಿದ್ದರು.
ಇರ್ಫಾನ್ ಭಾಟಿ 2014 ರಲ್ಲಿ ಗೋಮಿಯಾದ ಪಿಟ್ಸ್ ಮಾಡರ್ನ್ ಪಬ್ಲಿಕ್ ಸ್ಕೂಲ್‌ನಿಂದ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು. ನಂತರ ಅವರು 2019 ರಲ್ಲಿ ಪಶ್ಚಿಮ ಬಂಗಾಳದ ಹಲ್ದಿಯಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಕಂಪ್ಯೂಟರ್ ಸೈನ್ಸ್‌ನಲ್ಲಿ ಬಿ.ಟೆಕ್ ಮಾಡಿದರು. ಇದರ ಜೊತೆಗೆ ಬೈಜುಸ್ ಮತ್ತು ಫ್ಲಿಪ್‌ಕಾರ್ಟ್‌ನಂತಹ ಪ್ರತಿಷ್ಠಿತ ಕಂಪನಿಗಳಲ್ಲಿಯೂ ಕೆಲಸ ಮಾಡಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.