



ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ಬಂಟ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕಾರ್ಯಕ್ರಮ ಹಾಗೂ ಸನ್ಮಾನ ಕಾರ್ಯಕ್ರಮ ಇಂದು ನಡೆಯಿತು. ಶ್ರೀ ಅಶೋಕ್ ಅಡ್ಯಂತಾಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ವಿವಿಧ ತರಗತಿಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 1.22 ಲಕ್ಷ ಮೌಲ್ಯದ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ರವೀಂದ್ರ ಶೆಟ್ಟಿ ಬಜಗೋಳಿ, ಸುರೇಂದ್ರ ಶೆಟ್ಟಿ, ಸಂದೀಪ್ ಶೆಟ್ಟಿ ಸಾಣೂರು, ಶಾಮ್ ಶೆಟ್ಟಿ ನಲ್ಲೂ ರು, ಸುನೀತಾ ಸಿರಿಯಣ್ಣ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ಬಂಟರ ಸಂಘದ ಅಧ್ಯಕ್ಷರಾದ ಅವಿನಾಶ್ ಜಿ ಶೆಟ್ಟಿ ವಹಿಸಿದ್ದರು. ಪುರಸಭೆಯ ನೂತನ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕಯಾದ ಅವಿನಾಶ್ ಶೆಟ್ಟಿ ಹಾಗೂ ಕರ್ನಾಟಕ ಕ್ವಾರಿ ಓನರ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾದ ರವೀಂದ್ರಶೆಟ್ಟಿ ಬಜಗೋಳಿ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಯಶಸ್ಸಿಗೆ ಯುವ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ರಾಕೇಶ್ ಶೆಟ್ಟಿ ಕುಕ್ಕುಂದೂರು ಸಹಕರಿಸಿದರು. ಮುಟ್ಲುಪಾಡಿ ಸುಹಾಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.