logo
WhatsApp Image 2026-04-02 at 14.46.04.jpeg
hindalco everlast.jpeg

ಇಂದು ದೇಶದಲ್ಲಿ 12,591 ಕೋವಿಡ್ ಪ್ರಕರಣ: 40 ಸಾವು

ಟ್ರೆಂಡಿಂಗ್
share whatsappshare facebookshare telegram
20 Apr 2023
post image

ನವದೆಹಲಿ: ಕಳೆದ ಒಂದು ದಿನದ ಅವಧಿಯಲ್ಲಿ ಕೋವಿಡ್ ದೃಢಪಟ್ಟ 12,591 ಹೊಸ ಕೋವಿಡ್ ಪ್ರಕರಣಗಳು ಭಾರತದಲ್ಲಿ ವರದಿಯಾಗಿವೆ. ಎಂಟು ತಿಂಗಳಲ್ಲೇ ದಿನವೊಂದರಲ್ಲಿ ಪತ್ತೆಯಾದ ಗರಿಷ್ಠ ಪ್ರಕರಣಗಳಿವು. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 65,286 ಕ್ಕೆ ಏರಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳಿಂದ ತಿಳಿದು ಬಂದಿದೆ.

24 ಗಂಟೆಗಳ ಅವಧಿಯಲ್ಲಿ ಕೋವಿಡ್ ಕಾರಣದಿಂದ 40 ಸಾವುಗಳೂ ಸಂಭವಿಸಿವೆ. ಕೇರಳವೊಂದರಲ್ಲೇ 11 ಸಾವಾಗಿದೆ. ಈವರೆಗೆ ಮೃತಪಟ್ಟವರ ಸಂಖ್ಯೆ 5,31,230ಕ್ಕೆ ಏರಿದೆ.

ದೇಶದಲ್ಲಿ ಇಲ್ಲಿಯ ವರೆಗೆ ಪತ್ತೆಯಾದ ಕೋವಿಡ್ ಪ್ರಕರಣಗಳ ಸಂಖ್ಯೆ 4.48 ಕೋಟಿಗೆ ಏರಿದೆ.

ರಾಷ್ಟ್ರವ್ಯಾಪಿ ಕೋವಿಡ್ ಲಸಿಕೆ ಅಭಿಯಾನದ ಅಡಿಯಲ್ಲಿ ಇದುವರೆಗೆ ದೇಶದಲ್ಲಿ 220.66 ಕೋಟಿ ಡೋಸ್ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.