logo
WhatsApp Image 2026-04-02 at 14.46.04.jpeg
hindalco everlast.jpeg

ಕೆಲಸ ಕೊಡಿಸುವುದಾಗಿ ನಂಬಿಸಿ 13 ಲಕ್ಷ ರೂ ವಂಚನೆ: ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಟ್ರೆಂಡಿಂಗ್
share whatsappshare facebookshare telegram
1 Dec 2023
post image

ಕೋಟ: ಬ್ಯಾಂಕಿನಲ್ಲಿ ಕೆಲಸ ಮಾಡಿಸಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಲಸ ಹುಡುಕುತ್ತಿದ್ದ ಕಿರಿಮಂಜೇಶ್ವರ ಗ್ರಾಮದ ಮಹೇಶ್ ಕುಮಾರ್(35) ಎಂಬವರಿಗೆ 2021ರಲ್ಲಿ ಅವರ ತಂಗಿ ಶೈಲಶ್ರೀ ಅವರಿಂದ ವಡ್ಡರ್ಸೆ ನಿವಾಸಿ ಆರೋಪಿ ಅಜಿತ್ ಕುಮಾರ್ ಎಂಬಾತನ ಪರಿಚಯವಾಗಿತ್ತು. ಆತ ಬ್ಯಾಂಕಿನಲ್ಲಿ ಕೆಲಸ ಮಾಡಿಸಿಕೊಡುವುದಾಗಿ ಭರವಸೆ ನೀಡಿದ್ದನು.

ಅದನ್ನು ನಂಬಿದ ಮಹೇಶ್ ಕುಮಾರ್, ಆರೋಪಿ ಹೇಳಿದಂತೆ ಒಟ್ಟು 13 ಲಕ್ಷ ರೂ. ಹಣವನ್ನು ಹಂತ ಹಂತವಾಗಿ ಬ್ಯಾಂಕ್ ಖಾತೆಗೆ ಕಳುಹಿಸಿದ್ದರು. ಆದರೆ ಆರೋಪಿಯು ಈ ಹಣವನ್ನು ಪಡೆದು ದುರುಪಯೋಗಪಡಿಸಿಕೊಂಡು ವಂಚಿಸಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.