



ಕೊಲ್ಕತ್ತಾ: ಸಿಡಿಲು ಬಡಿದು 14 ಜನ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ಗುರುವಾರ ನಡೆದಿದೆ.
ಐದು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ. ಈ ವೇಳೆ ಸಿಡಿಲು ಬಡಿದು 14 ಮಂದಿ ಸಾವನ್ನಪ್ಪಿದ್ದಾರೆ. ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ ನಾಲ್ವರು, ಮುರ್ಷಿದಾಬಾದ್ ಹಾಗೂ ಉತ್ತರ 24 ಪರಗಣದಲ್ಲಿ ತಲಾ ಇಬ್ಬರು, ಪಶ್ಚಿಮ ಮಿಡ್ನಾಪುರ ಹಾಗೂ ಹೌರಾದಲ್ಲಿ ತಲಾ ಮೂರು ಜನ ಸಾವಿಗೀಡಾಗಿದ್ದಾರೆ ಎಂದು ವಿಪತ್ತು ನಿರ್ವಹಣಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದೆಡೆಗೆ 79 ಕಿ.ಮೀ ವೇಗದಲ್ಲಿ ಬೀಸಿದ ಗಾಳಿಯಿಂದ ಮಳೆ ಸಂಭವಿಸಿದೆ. ಅಲ್ಲದೆ ಗಾಳಿಯ ಈ ವೇಗ ಒಂದು ನಿಮಿಷಕ್ಕಿಂತಲೂ ಕಡಿಮೆ ಅವಧಿಯದ್ದಾಗಿತ್ತು ಎಂದು ಪ್ರಾದೇಶಿಕ ಹವಾಮಾನ ಕೇಂದ್ರದ (Meteorological Centre) ಅಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.