



ಮೈಸೂರು: ಜಿ20 ಶೃಂಗಸಭೆ ಗಣ್ಯರು ಮೈಸೂರು ಅರಮನೆಗೆ ಭೇಟಿ ನೀಡುತ್ತಿರುವ ಹಿನ್ನೆಲೆ ಎರಡು ದಿನಗಳ ಕಾಲ ಅರಮನೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಜಿ20 ಗಣ್ಯರು ಮತ್ತು ಅಧಿಕಾರಿಗಳು ಅರಮನೆಗೆ ಭೇಟಿ ನೀಡಲಿದ್ದು, ಆಗಸ್ಟ್ 1 ಮತ್ತು 2ರಂದು ಅರಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.
ಆಗಸ್ಟ್ 1ರಂದು ಮಧ್ಯಾಹ್ನ 2:30ರಿಂದ ನಿರ್ಬಂಧ ಆದೇಶವನ್ನು ಹೊರಡಿಸಲಾಗಿದ್ದು, ಆಗಸ್ಟ್ 2ರಂದು ಮಧ್ಯಾಹ್ನ ಧ್ವನಿ ಬೆಳಕು ಕಾರ್ಯಕ್ರಮವನ್ನು ಕೂಡಾ ರದ್ದುಗೊಳಿಸಲಾಗಿದೆ. ಅರಮನೆಯ ಸುತ್ತ ಮುತ್ತ ಡ್ರೋನ್ ಹಾರಾಟವನ್ನು ನಿಷೇಧಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.