logo
WhatsApp Image 2026-04-02 at 14.46.04.jpeg
hindalco everlast.jpeg

ಪಾವಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 2 ಮಂದಿ ಸ್ಥಳದಲ್ಲೇ ಸಾವು; ಓರ್ವ ಗಂಭೀರ

ಟ್ರೆಂಡಿಂಗ್
share whatsappshare facebookshare telegram
22 Apr 2022
post image

ಸುರತ್ಕಲ್: ಓಮ್ನಿ ಕಾರು ಹಾಗೂ ಖಾಸಗಿ ಎಕ್ಸ್ ಪ್ರೆಸ್ ಬಸ್  ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಪಾವಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ನಡೆದಿದೆ.

ಓಮ್ನಿ ಕಾರು ಹಳೆಯಂಗಡಿ ಪೇಟೆ ಒಳರಸ್ತೆಯಾಗಿ ಪಾವಂಜೆ ಜಂಕ್ಷನ್ ಗೆ ಬರುತ್ತಿದ್ದು ಬಸ್ ಉಡುಪಿ ಕಡೆಗೆ ಸಂಚರಿಸುತ್ತಿತ್ತು. ಮೃತಪಟ್ಟವರನ್ನು ಓಮ್ನಿಯಲ್ಲಿದ್ದ ವಸಂತ (64) ಹಾಗೂ ಭುಜಂಗ (62) ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಇವರೆಲ್ಲರೂ‌ ಮುಕ್ಕದ ಪಡ್ರೆ ನಿವಾಸಿಗಳು ಎಂದು ತಿಳಿದು ಬಂದಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು ಕಾರಿನಲ್ಲಿದ್ದ ವಸಂತ ಮತ್ತು ಬುಜಂಗ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಮಂಗಳೂರು ಉತ್ತರ ವಿಭಾಗದ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.