



ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ಎಲ್ಲಾ ಗ್ರಾಮೀಣ ಭಾಗದ ಜನವಸತಿ ಪ್ರದೇಶದÀ ಕುಟುಂಬಗಳಿಗೆ ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೆ ಕಾರ್ಯಾತ್ಮಕ ನಳ ಸಂಪರ್ಕ ಒದಗಿಸಿ ಪ್ರತಿ ಸದಸ್ಯನಿಗೆ ದಿನಕ್ಕೆ ೫೫ ಲೀಟರ್ ಶುದ್ಧ ಕುಡಿಯುವ ನೀರನ್ನು ಒದಗಿಸುವ ಯೋಜನೆಯನ್ನು ಹೊಂದಲಾಗಿದ್ದು ಕಾರ್ಕಳ ಮತ್ತು ಹೆಬ್ರಿ ತಾಲೂಕಿನಲ್ಲಿ ಸದರಿ ಯೋಜನೆಯಡಿ ಒಟ್ಟು ೩೪ ಗ್ರಾಮ ಪಂಚಾಯತ್‌ಗಳ ೫೦೪ ಜನವಸತಿ ಪ್ರದೇಶಗಳಿಗೆ ನೀರಿನ ಸಂಪರ್ಕ ಒದಗಿಸಲು ಕಾರ್ಕಳ ತಾಲೂಕಿನಲ್ಲಿ ೧೫೦ ಕಾಮಗಾರಿಗಳನ್ನು ಮತ್ತು ಹೆಬ್ರಿ ತಾಲೂಕಿನಲ್ಲಿ ೪೮ ಕಾಮಗಾರಿಗಳನ್ನು ಕೈಗೊಳ್ಳಲು ಅಂದಾಜು ಮೊತ್ತ ರೂ. ೫೩.೩೨ ಕೋಟಿಗಳಿಗೆ ಯೋಜನೆ ರೂಪಿಸಲಾಗಿರುತ್ತದೆ. ಸದರಿ ಕಾಮಗಾರಿಗಳಲ್ಲಿ ಒಟ್ಟು ೧೩೩ ಕೊಳವಿಬಾವಿಗಳು ೯೨ ಮೇಲ್ಮಟ್ಟದ ಟ್ಯಾಂಕ್ ಗಳನ್ನು ನಿರ್ಮಿಸಲು ಅವಕಾಶ ಕಲ್ಪಿಸಲಾಗಿದೆ. ೧೯೮ ಕಾಮಗಾರಿಗಳ ಪೈಕಿ ೧೪ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದ್ದು, ೧೩೭ ಕಾಮಗಾರಿಗಳು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿರುತ್ತವೆ ಹಾಗೂ ೬೪ ಮೇಲ್ಮಟ್ಟದ ಟ್ಯಾಂಕ್ ಗಳು ಪ್ರಗತಿಯಲ್ಲಿರುತ್ತದೆ. ಬಾಕಿ ಉಳಿದ ಕಾಮಗಾರಿಗಳು ಟೆಂಡರ್ ಪ್ರಕ್ರಿಯೆಯ ಹಂತದಲ್ಲಿರುತ್ತದೆ. ಇತ್ತೀಚಿನ ದಿನಗಳಲ್ಲಿ ಕೊಳವೆಬಾವಿಗಳಲ್ಲಿನ ನೀರಿನ ಲಭ್ಯತೆಯು ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ವಾರಾಹಿ ನದಿಯ ಶಾಶ್ವತ ಜಲಮೂಲದಿಂದ ನೀರನ್ನು ಪಡೆದು ಕಾರ್ಕಳ ಕ್ಷೇತ್ರದ ಉಭಯ ತಾಲೂಕಿನ ಎಲ್ಲಾ ಜನವಸತಿಗಳಲ್ಲಿರುವ ಪ್ರತಿಯೊಬ್ಬರಿಗೂ ದಿನಕ್ಕೆ ತಲಾ ೫೫ ಲೀಟರ್ ಶುದ್ಧ ಕುಡಿಯುವ ನೀರನ್ನು ಮುಂದಿನ ೩೦ ವರ್ಷಗಳವರೆಗೆ ಸರಬರಾಜು ಮಾಡಲು ಅಂದಾಜು ರೂ.೬೦೦.೦೦ ಕೋಟಿಗೂ ಅಧಿಕ ಮೊತ್ತದ ಶಾಶ್ವತ ಕುಡಿಯುವ ನೀರು ಸರಬರಾಜು ಯೋಜನೆಯನ್ನು ರೂಪಿಸಲಾಗುತ್ತಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.