



ನವದೆಹಲಿ:ಉಜ್ವಲ ಯೋಜನೆಯ ಫಲಾನುಭವಿಗಳಿಗೆ ವಾರ್ಷಿಕವಾಗಿ 12 ಸಿಲಿಂಡರ್‌ಗಳ ಪ್ರತಿ ರೀಫಿಲ್‌ಗಳಿಗೆ 200 ರೂ. ಸಬ್ಸಿಡಿ ನೀಡಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆಯ (ಪಿಎಂಯುವೈ) ಫಲಾನುಭವಿಗಳಿಗೆ ಕೇಂದ್ರ ಸಚಿವ ಸಂಪುಟವು ಶುಕ್ರವಾರ 14.2 ಕೆಜಿ ಸಿಲಿಂಡರ್‌ಗೆ ವರ್ಷಕ್ಕೆ 12 ರೀಫಿಲ್‌ಗಳಿಗೆ ತಲಾ 200 ರೂ. ಸಬ್ಸಿಡಿ ನೀಡಿಕೆಗೆ ಅನುಮೋದನೆ ನೀಡಿದೆ.
ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯ ಸಭೆಯಲ್ಲಿ ತೆಗೆದುಕೊಂಡ ಈ ನಿರ್ಧಾರದ ಬಗ್ಗೆ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದರು. ಮಾರ್ಚ್ 1, 2023 ರವರೆಗೆ ಈ ಯೋಜನೆಯ 9.59 ಕೋಟಿ ಫಲಾನುಭವಿಗಳಿದ್ದಾರೆ. 2022-23ರ ಹಣಕಾಸು ವರ್ಷದಲ್ಲಿ ಒಟ್ಟು ವೆಚ್ಚ 6,100 ಕೋಟಿ ರೂ. ಮತ್ತು 2023-24ಕ್ಕೆ 7,680 ಕೋಟಿ ರೂ ವೆಚ್ಚವಾಗಿದೆ. ಸಹಾಯಧನವನ್ನು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.