



ಬೆಂಗಳೂರು : ಎರಡು ಸಾವಿರ ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ.
ಆದರೆ, ಈ ಕರೆನ್ಸಿ ನೋಟುಗಳು ಲೀಗಲ್ ಅಗಿ ಮುಂದುವರಿಯಲಿವೆ.
2,000 ರೂ ನೋಟು ಹೊಂದಿರುವವರು ಅದನ್ನು ಮರಳಿಸಲು ಸಮಯಾವಕಾಶ ಕೊಡಲಾಗುತ್ತದೆ. ಆರ್ಬಿಐ ನೀಡಿರುವ ಮಾಹಿತಿ ಪ್ರಕಾರ 2023 ಸೆಪ್ಟಂಬರ್ 30ರೊಳಗೆ 2,000 ಮುಖಬೆಲೆಯ ನೋಟುಗಳನ್ನು ವಾಪಸ್ ಕೊಟ್ಟು ವಿನಿಮಯ ಮಾಡಿಕೊಳ್ಳಬಹುದು.
ನವೆಂಬರ್ 8, 2016 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ 500 ಮತ್ತು 1,000 ರೂಪಾಯಿ ನೋಟ್ ಬ್ಯಾನ್ ಮಾಡುವುದಾಗಿ ಘೋಷಿಸಿದ್ದರು. ನೋಟು ಅಮಾನ್ಯೀಕರಣ ನೀತಿಯನ್ನು ಜಾರಿಗೆ ತರುವ ಮುಖ್ಯ ಕಾರಣ ಕಪ್ಪುಹಣಕ್ಕೆ(ಬ್ಲ್ಯಾಕ್‌ಮನಿ) ಕಡಿವಾಣ ಹಾಕುವುದು, ನಕಲಿ ನೋಟುಗಳನ್ನು ನಿರ್ಮೂಲನೆ ಮಾಡುವುದು ಮತ್ತು ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸುವ ಮೂಲಕ ನಗದು ರಹಿತ ಆರ್ಥಿಕತೆಯನ್ನು ಸೃಷ್ಟಿಸುವುದು ಯೋಜನೆಯ ಗುರಿಯಾಗಿತ್ತು.
ಹಳೆ ನೋಟುಗಳನ್ನು ಬದಲಿಸಲು ಆರ್‌ಬಿಐ ಹೊಸ 500 ರ ನೋಟು ಮತ್ತು 2,000 ರೂಪಾಯಿ ನೋಟುಗಳನ್ನು ಪರಿಚಯಿಸಿತು. ಪ್ರಸ್ತುತ, ಆರ್‌ಬಿಐ ರೂ 2, ರೂ 5, ರೂ 10, ರೂ 20, ರೂ 50, ರೂ 100, ರೂ 200 ಮತ್ತು ರೂ 500 ಮತ್ತು ನೋಟುಗಳನ್ನು ಪೂರೈಸುತ್ತಿದೆ. ಆದರೆ ಆರ್ ಬಿಐ 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ನಾಲ್ಕು ವರ್ಷಗಳ ಹಿಂದೆಯೇ ನಿಲ್ಲಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.