logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

2024-25ರ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ: ಅಕ್ಟೋಬರ್‌ 26ರಿಂದ ಏಪ್ರಿಲ್‌ 19ರವರೆಗೆ ಕಂಬಳ ಸೀಸನ್..!

ಟ್ರೆಂಡಿಂಗ್
share whatsappshare facebookshare telegram
10 Aug 2024
post image

ಮೂಡುಬಿದಿರೆ: 2024-25ರ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟವಾಗಿದ್ದು, ಕಂಬಳ ಸೀಸನ್‌ ಅಕ್ಟೋಬರ್‌ 26 ರಿಂದ 2025ರ ಏಪ್ರಿಲ್‌ 19ರವರೆಗೆ ನಡೆಯಲಿದೆ.

ಕಳೆದ ಬಾರಿ ಬೆಂಗಳೂರು ಅರಮನೆ ಮೈದಾನದಲ್ಲಿ ಕಂಬಳ ನಡೆಸಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಈ ಬಾರಿ ಮಲೆನಾಡು ಭಾಗದ ಶಿವಮೊಗ್ಗದಲ್ಲಿ ಕಂಬಳ ನಡೆಸಲು ತೀರ್ಮಾನಿಸಲಾಗಿದೆ. ಈ ಸೀಸನ್‌ ನ ಮೊದಲ ಕಂಬಳ ಬೆಂಗಳೂರಿನಲ್ಲಿ ನಡೆದರೆ, ಅಂತಿಮ ಕಂಬಳವು ಶಿವಮೊಗ್ಗದಲ್ಲಿ ನಡೆಯಲಿದೆ.

ಮೂಡುಬಿದಿರೆಯಲ್ಲಿ ಶನಿವಾರ (ಆ.10) ನಡೆದ ಜಿಲ್ಲಾ ಕಂಬಳ ಸಮಿತಿಯ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. 2024-25ರ ಕಂಬಳ ಸೀಸನ್‌ ಅಕ್ಟೋಬರ್‌ 26ರಂದು ಆರಂಭವಾಗಿ 2025ರ ಏಪ್ರಿಲ್‌ 19ರವರೆಗೆ ನಡೆಯಲಿದೆ.

ಈ ಬಾರಿ ಮಲೆನಾಡು ಭಾಗದ ಶಿವಮೊಗ್ಗದಲ್ಲಿ ಕಂಬಳ: ಕರಾವಳಿಯ ಪ್ರಮುಖ ಜಾನಪದ ಕ್ರೀಡೆಯಾಗಿರುವ ಕಂಬಳವನ್ನು ಕಳೆದ ವರ್ಷ ಬೆಂಗಳೂರಿನಲ್ಲಿ ನಡೆಸಲಾಗಿತ್ತು. ಜತೆಗೆ ಇತರ ಕಡೆಗಳಲ್ಲೂ ಕಂಬಳ ಆಯೋಜನೆಗೆ ಒಲವು ವ್ಯಕ್ತವಾಗಿದೆ. ಅದರಂತೆ ಶಿವಮೊಗ್ಗದಲ್ಲಿ ಈ ಬಾರಿ ಕಂಬಳ ನಡೆಸಲು ಅಲ್ಲಿನ ಉದ್ಯಮಿಗಳು, ಕರಾವಳಿ ಭಾಗದ ಪ್ರಮುಖರು ಹಾಗೂ ಇತರರು ಆಸಕ್ತಿ ತೋರಿದ್ದಾರೆ.

ಪಿಲಿಕುಳ ಕಂಬಳ ಆರಂಭ: ಕರಾವಳಿಯಲ್ಲಿ ಸರಕಾರಿ ಪ್ರಾಯೋಜಕತ್ವದಲ್ಲಿ ಹಿಂದೆ ನಡೆಯುತ್ತಿದ್ದ ಪಿಲಿಕುಳ ಕಂಬಳ ಈ ಬಾರಿ ಮತ್ತೆ ಆರಂಭವಾಗುತ್ತಿದೆ. ನವೆಂಬರ್‌ 9ರಂದು ಪಿಲಿಕುಳದಲ್ಲಿ ಕಂಬಳ ಆಯೋಜನೆಗೆ ನಿರ್ಧರಿಸಲಾಗಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.