



ತಿರುಪತಿ: ಹುಂಡಿ ಮತ್ತು ವಿದೇಶಿ ಕೊಡುಗೆಗಳನ್ನು ಸ್ವೀಕರಿಸುವಲ್ಲಿ ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯ (ಎ್ಸಿಆರ್‌ಎ) ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇರೆಗೆ ತಿರುಮಲ ತಿರುಪತಿ ದೇವಸ್ಥಾನಕ್ಕೆ (ಟಿಟಿಡಿ) ರಿಸರ್ವ್ ಬ್ಯಾಂಕ್ ಆ್ ಇಂಡಿಯಾ (ಆರ್‌ಬಿಐ) 3 ಕೋಟಿ ರೂ. ದಂಡ ವಿಸಿದೆ.
ಹುಂಡಿ ಮತ್ತು ವಿದೇಶಿ ಕೊಡುಗೆಗಳನ್ನು ಸ್ವೀಕರಿಸುವಲ್ಲಿ ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯಡಿಯಲ್ಲಿ ಟಿಟಿಡಿಗೆ 10 ಕೋಟಿ ರೂ. ದಂಡ ವಿಸಲಾಗಿತ್ತು. ಆದರೆ, ಎ್ಸಿಆರ್‌ಎ ನಿಯಂತ್ರಣ ಮಂಡಳಿ ಮತ್ತು ದೇವಾಲಯದ ಟ್ರಸ್ಟ್ ನಡುವೆ ಮಾತುಕತೆ ನಡೆದು ಅಂತಿಮವಾಗಿ ದಂಡದ ಮೊತ್ತವನ್ನು 3 ಕೋಟಿ ರೂ.ಗೆ ಇಳಿಸಲಾಗಿದೆ.
ಟಿಟಿಡಿ ವಿದೇಶಿ ದೇಣಿಗೆಯನ್ನು ಬಳಸಿಕೊಂಡ ರೀತಿಯಲ್ಲೂ ತಪ್ಪು ಕಂಡುಬಂದಿದ್ದು, ಟಿಟಿಡಿ ವಿದೇಶಿ ಕೊಡುಗೆಗಳ ಮೂಲಕ ಗಳಿಸಿದ ಬಡ್ಡಿಯ ಬಳಕೆಯ ಬಗ್ಗೆಯೂ ಸಚಿವಾಲಯ ಆಕ್ಷೇಪ ವ್ಯಕ್ತಪಡಿಸಿದೆ. ದೇವಾಲಯದ ಟ್ರಸ್ಟ್‌ನ ಎ್ಸಿಆರ್‌ಎ ನೋಂದಣಿಯನ್ನು ತಾಂತ್ರಿಕ ವ್ಯತ್ಯಾಸಗಳಿಂದಾಗಿ ಸ್ಥಗಿತಗೊಳಿಸಲಾಗಿದೆ ಮತ್ತು ನಿಯ ದುರುಪಯೋಗದಿಂದಲ್ಲ ಎಂದು ಹೇಳಲಾಗಿದೆ. ಮಾರ್ಚ್ 2023ಕ್ಕೆ ಕೊನೆಗೊಳ್ಳುವ ಐದು ವರ್ಷಗಳ ಅವಯಲ್ಲಿ, ದೇವಾಲಯದ ಟ್ರಸ್ಟ್ 30 ಕೋಟಿ ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ಸಂಗ್ರಹಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.