logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಗೃಹಜ್ಯೋತಿ ಯೋಜನೆಯಿಂದ ಜಿಲ್ಲೆಯ 3.15 ಲಕ್ಷ ಜನರಿಗೆ ಪ್ರಯೋಜನ: ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಟ್ರೆಂಡಿಂಗ್
share whatsappshare facebookshare telegram
5 Aug 2023
post image

ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯಿಂದ ಉಡುಪಿ ಜಿಲ್ಲೆಯ 3,15,692 ಜನರಿಗೆ ಪ್ರಯೋಜನ ದೊರೆಯಲಿದೆ ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಹೇಳಿದರು. ಅವರು ಇಂದು ಕುಂಜಿಬೆಟ್ಟು ಕ.ವಿ.ಪ್ರ.ನಿ.ನಿ ನೌಕರರ ಸಂಘದ ಸಭಾಭವನದಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ರಾಜ್ಯದಲ್ಲಿನ ಎಲ್ಲಾ ಭಾಷೆ, ಜಾತಿ, ಧರ್ಮದವರ ಶ್ರೇಯೋಭಿವೃದ್ಧಿಗಾಗಿ ಚುನಾವಣೆಗೂ ಮುನ್ನ ಸರ್ಕಾರ ಘೋಷಿಸಿದ್ದ ಐದು ಯೋಜನೆಗಳಲ್ಲಿ, ಗೃಹಜ್ಯೋತಿ ಯೋಜನೆ ಆರಂಭದ ನಂತರ, ಮೂರು ಯೋಜನೆಗಳು ಕೇವಲ ಮೂರು ತಿಂಗಳಲ್ಲಿ ಜಾರಿಯಾದಂತಾಗಿದೆ.

ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಸರ್ವರಿಗೂ ಸಮ ಪಾಲು ಸಮ ಬಾಳು ಎಂಬ ತತ್ವದಡಿಯಲ್ಲಿ ರಾಜ್ಯವನ್ನು ಪ್ರಗತಿಯುತ್ತ ಮುನ್ನೆಡೆಸುತ್ತಿದೆ ಎಂದರು.

ರಾಜ್ಯದಲ್ಲಿ ಈಗಾಗಲೇ ಶಕ್ತಿ, ಅನ್ನಭಾಗ್ಯ ಯೋಜನೆ ಜಾರಿಯಾಗಿದೆ. ಈಗ ಗೃಹಜ್ಯೋತಿ ಆರಂಭವಾಗಿದೆ. ಇದೇ ಆಗಸ್ಟ್ 18 ಅಥವಾ 20 ರಂದು ಬೆಳಗಾವಿಯಲ್ಲಿ ಬೃಹತ್ ಸಮಾವೇಶದ ಮೂಲಕ ಗೃಹಲಕ್ಷ್ಮೀ ಯೋಜನೆ ಜಾರಿಯಾಗಲಿದೆ. ಬೆಲೆ ಏರಿಕೆಯಿಂದಾಗಿ ತತ್ತರಿಸಿ ಹೋಗಿದ್ದ ಜನರಿಗೆ ಭರವಸೆ ತುಂಬುವುದಕ್ಕಾಗಿ ನಮ್ಮ ಸರ್ಕಾರ ಗ್ಯಾರಂಟಿಗಳನ್ನು ಘೋಷಣೆ ಮಾಡಿತು ಎಂದರು.

ರಾಜ್ಯದ 1.42 ಕೋಟಿ ಗ್ರಾಹಕರು ಗೃಹಜ್ಯೋತಿ, 1.28 ಕೋಟಿ ಕುಟುಂಬಗಳು ಅನ್ನಭಾಗ್ಯ ಯೋಜನೆಯ ಪ್ರಯೋಜನ ಪಡೆಯಲಿದ್ದು, ಶಕ್ತಿ ಯೋಜನೆಯಡಿ ಇದುವರೆಗೆ 30 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಗೃಹ ಲಕ್ಷ್ಮಿ ಯೋಜನೆಯಡಿ 1.28 ಕೋಟಿ ಕುಟುಂಬಗಳಿಗೆ ಡಿಬಿಟಿ ಮೂಲಕ ಪ್ರತೀ ತಿಂಗಳು ರೂ.2000 ನೀಡಲಿದ್ದು, ಇದಕ್ಕಾಗಿ ಇದುವರೆಗೆ 1 ಕೋಟಿ ಕುಟುಂಬಗಳ ಮಹಿಳೆಯರು ನೊಂದಣಿ ಮಾಡಿಕೊಂಡಿದ್ದಾರೆ. ಗೃಹಜ್ಯೋತಿ ಯೋಜನೆಯಡಿ ಉಡುಪಿ ಜಿಲ್ಲೆಯಲ್ಲಿ 3,15,692‌‌ ಗ್ರಾಹಕರಿದ್ದು, ಈ ಪೈಕಿ ಶೇ.80 ರಷ್ಟು ಅಂದರೆ 2,69,949 ಗ್ರಾಹಕರು ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ನಮ್ಮ ಸರ್ಕಾರದಿಂದ ರಾಜ್ಯ ಸುಭದ್ರ ಮತ್ತು ಪ್ರಗತಿಪಥ ದತ್ತ ಮುನ್ನಡೆಯಲಿದೆ ಎಂದರು.

ಶಾಸಕ ಯಶ್‌ಪಾಲ್ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಇದೇ ವೇಳೆ ಸಚಿವರು ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಉಚಿತ ಬಿಲ್‌ನ ದೃಢೀಕರಣ ಪತ್ರ ವಿತರಿಸಿದರು. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ಮೆಸ್ಕಾಂ ನಿರ್ದೇಶಕ ಹೆಚ್.ಜಿ. ರಮೇಶ್, ಮುಖ್ಯ ಇಂಜಿನಿಯರ್ ಪುಷ್ಪಾ, ಪ್ರಧಾನ ವ್ಯವಸ್ಥಾಪಕ ಅಭಿಷೇಕ್, ಉಡುಪಿ ವೃತ್ತದ ಅಧೀಕ್ಷಕ ಇಂಜಿನಿಯರ್ ದಿನೇಶ್ ಉಪಾಧ್ಯ ಮತ್ತಿತರರು ಉಪಸ್ಥಿತರಿದ್ದರು. ಮೆಸ್ಕಾಂ ಉಡುಪಿ ವಿಭಾಗದ ಕಾರ್ಯ ನಿರ್ವಾಹಕ ಇಂಜಿನಿಯರ್ ಪ್ರಸನ್ನ ಕುಮಾರ್ ಸ್ವಾಗತಿಸಿದರು, ಲೆಕ್ಕಾಧಿಕಾರಿ ಗಿರೀಶ್ ನಿರೂಪಿಸಿದರು. ವಿನಾಯಕ್ ಕಾಮತ್ ವಂದಿಸಿದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.