



ಮುಂಬೈ: ಆನ್‌ಲೈನ್ ವಂಚನೆಗೊಳಗಾದ ಮಹಿಳೆಯ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಮುಂಬೈ ಪೊಲೀಸರು, ವಂಚಕರ ಖಾತೆಗೆ ವರ್ಗಾವಣೆಯಾಗಬೇಕಿದ್ದ 3.70 ಕೋಟಿ ರೂಪಾಯಿಯನ್ನು ತಡೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಜನವರಿ 4.ರಂದು ಈ ಘಟನೆ ಸಂಭವಿಸಿದ್ದು ಮುಂಬೈಯಲ್ಲಿ ವಾಸವಿದ್ದ ಮಹಿಳೆಯೊಬ್ಬರು ಸ್ಟಾಕ್ ಹೂಡಿಕೆಯಲ್ಲಿ ಹೆಚ್ಚಿನ ಲಾಭ ಗಳಿಸಬಹುದು ಎಂಬ ಸೈಬರ್ ವಂಚಕರ ಜಾಲಕ್ಕೆ ಸಿಲುಕಿದ್ದರು. ಮೋಸ ಹೋಗಿರುವುದು ತಿಳಿಯುತ್ತಿದ್ದಂತೆ ಎಚ್ಚೆತ್ತ ಮಹಿಳೆ ತಕ್ಷಣವೇ ಮುಂಬೈ ಅಪರಾಧ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ಕರೆ ಮಾಡಿ ದೂರು ಸಲ್ಲಿಸಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತ್ವರಿತವಾಗಿ ಕ್ರಮಕೈಗೊಂಡಿದ್ದಾರೆ. ಸಂಬಂಧಿಸಿದ ಬ್ಯಾಂಕಿನ ನೋಡಲ್ ಅಧಿಕಾರಿಯೊಂದಿಗೆ ಮಾತನಾಡಿ ಹಣ ವರ್ಗಾವಣೆಗೆ ಬಳಸಿದ ಖಾತೆಗಳನ್ನು ಫ್ರೀಜ್ ಮಾಡುವ ಮೂಲಕ 3.67 ಕೋಟಿ ರೂಪಾಯಿಯನ್ನು ತಡೆ ಹಿಡಿದಿದ್ದಾರೆ.
2023ರಲ್ಲಿ ಸೈಬರ್ ವಂಚಕರಿಂದ ಕಳೆದುಕೊಂಡಿದ್ದ 26.48 ಕೋಟಿ ರೂಪಾಯಿ ಯನ್ನು ಸಂತ್ರಸ್ತರಿಗೆ ಹಿಂತಿರುಗಿಸುವಲ್ಲಿ ಮುಂಬೈ ಪೊಲೀಸರು ಯಶಸ್ವಿಯಾಗಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.