



ಬೆಂಗಳೂರು: ರಾಜ್ಯದ ವಿವಿಧೆಡೆ ಶುಕ್ರವಾರವೂ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಮಳೆ ಸಂಬಂಧಿತ ಅವಘಡಗಳಿಂದ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಹದಿಮೂರು ಜಾನುವಾರುಗಳು ಸಾವನ್ನಪ್ಪಿವೆ.
ಕುರಿ ಮೇಯಿಸಲು ಹೋಗಿದ್ದಾಗ ಸಿಡಿಲು ಬಡಿದು ಗದಗ ತಾಲ್ಲೂಕಿನ ಲಿಂಗದಾಳ ಗ್ರಾಮದ ಶರಣಪ್ಪ ಪುರದ (19) ಹಾಗೂ ದೇವರಾಜ ಹನುಮಂತಪ್ಪ (19) ಮೃತಪಟ್ಟಿದ್ದಾರೆ. ಮತ್ತೊಬ್ಬ ಕುರಿಗಾಹಿ ಸುನೀಲ್ ಎಂಬಾತ ಗಾಯಗೊಂಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಜಾಲಿಹಾಳ ಗ್ರಾಮದಲ್ಲಿ ಗುರುವಾರ ಮಧ್ಯರಾತ್ರಿ ಮಳೆಯಿಂದ ಮನೆ ಚಾವಣಿ ಕುಸಿದು ಯಂಕುಬಾಯಿ ಕುಲಕರ್ಣಿ (79), ಶಾರವ್ವ ಪತ್ತಾರ (58) ಮೃತಪಟ್ಟಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.