logo
WhatsApp Image 2026-04-02 at 14.46.04.jpeg
hindalco everlast.jpeg

ತರಕಾರಿ ಅಂಗಡಿಯಿಂದ 40 ಕೆಜಿ ಟೊಮೆಟೊ ಕಳ್ಳತನ

ಟ್ರೆಂಡಿಂಗ್
share whatsappshare facebookshare telegram
12 Jul 2023
post image

ಚಿಕ್ಕಮಗಳೂರು: ಟೊಮೆಟೊ ಬೆಲೆ ಗಗನಕ್ಕೇರುತ್ತಿದ್ದಂತೆ ಅಲ್ಲಲ್ಲಿ ಟೊಮೆಟೊ ಕಳ್ಳತನ ಪ್ರಕರಣ ನಡೆಯಲು ಆರಂಭವಾಗಿದೆ. ಇದೀಗ ಚಿಕ್ಕಮಗಳೂರಿನಲ್ಲೂ ಟೊಮೆಟೊ ಕಳ್ಳತನ ಪ್ರಕರಣ ನಡೆದಿದೆ.

ಚಿಕ್ಕಮಗಳೂರಿನ ತರಕಾರಿ ಅಂಗಡಿಯಿಂದ ಸುಮಾರು 40 ಕೆಜಿ ಟೊಮೆಟೊ ಕಳ್ಳತನ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲಾದ್ಯಂತ ಟೊಮೆಟೊ ಬೆಲೆ 100 ರೂಪಾಯಿಯಿಂದ 150 ರೂಪಾಯಿ ವರೆಗೆ ಇದೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪೊಲೀಸ್ ಠಾಣೆಯ ಬಳಿ ಇರುವ ತರಕಾರಿ ಅಂಗಡಿಯಲ್ಲಿ ಈ ಕಳ್ಳತನ ಪ್ರಕರಣ ನಡೆದಿದ್ದು, ಸುಮಾರು 40 ಕೆಜಿಯಷ್ಟು ಟೊಮೆಟೊ ಕದ್ದು ಪರಾರಿಯಾಗಿದ್ದಾರೆ.

ಘಟನೆ ಸಂಬಂಧ ತರಕಾರಿ ಅಂಗಡಿ ಮಾಲೀಕ ನದೀಮ್ ಎಂಬುವರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.