logo
WhatsApp Image 2026-04-02 at 14.46.04.jpeg
hindalco everlast.jpeg

5 ಲಕ್ಷ ರೂ. ನೀಡುವಂತೆ ಪತಿಯಿಂದ ಜೀವಬೆದರಿಕೆ: ಕೌಡೂರು ಗ್ರಾಮದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ

ಟ್ರೆಂಡಿಂಗ್
share whatsappshare facebookshare telegram
22 Jul 2022
post image

ಕಾರ್ಕಳ:

ವರದಕ್ಷಿಣೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಕಾರ್ಕಳದ ಕೌಡೂರು ಗ್ರಾಮದ ಸೌಮ್ಯ ಎಂಬವರು ತಮ್ಮ ಪತಿ ಸುನಿಲ್ ಎಂಬಾತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಸೌಮ್ಯ ಅವರು 2019 ರ ಮೇ.12 ರಂದು ಕಾರ್ಕಳ ಪೆರ್ವಾಜೆಯಲ್ಲಿ ಸುನಿಲ್ ಎಂಬಾತನನ್ನು ಮದುವೆಯಾಗಿದ್ದರು. ಮದುವೆಯಾದ 1 ವರ್ಷದ ಬಳಿಕ ಸುನಿಲ್ ಹಣಕ್ಕಾಗಿ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿ 5ಲಕ್ಷ ರೂ ವರದಕ್ಷಿಣೆ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದನು. ಅದರಂತೆ ಸೌಮ್ಯ 80 ಸಾವಿರ ರೂ. ಹಣ ನೀಡಿದ್ದರು. ಅಲ್ಲದೆ, ಮದುವೆಯಾದ ಬಳಿಕ ಸೌಮ್ಯ ತಮ್ಮ ತಾಯಿ ಮನೆಯಲ್ಲಿಯೇ ಇದ್ದು, ಸುನಿಲ್ ತನ್ನ ಮನೆಗೆ ಕರೆದುಕೊಂಡು ಹೋಗಲು ಬಂದಿರುವುದಿಲ್ಲ. ಇದರಿಂದ ನೊಂದು ಸೌಮ್ಯ ಅವರು ಆತ್ಮಹತ್ಯೆಗೂ ಯತ್ನಿಸಿದ್ದರು. ಬಳಿಕ ಜೂ.20 ರಂದು ಕಾರ್ಕಳ ನಗರ ಠಾಣೆಗೆ ದೂರು ನೀಡಿದ ಮೇರೆಗೆ ಸುನೀಲ್ ಪತ್ನಿಯನ್ನು ಉತ್ತಮವಾಗಿ ನೋಡಿಕೊಳ್ಳುವುದಾಗಿ ತಿಳಿಸಿದ್ದನು. ಆದರೆ ಬಳಿಕ ಫೋನ್ ಮಾಡಿದಾಗ ಇನ್ನೂ 5 ಲಕ್ಷ ರೂ ವರದಕ್ಷಿಣೆ ಕೊಡುವಂತೆ ಜೀವ ಬೆದರಿಕೆ ಹಾಕಿ ಮಾನಸಿಕ ಹಿಂಸೆ ನೀಡಿದ್ದಾನೆ ಎಂದು ಸೌಮ್ಯ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಅದರಂತೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.