



ಮಾಸ್ಕೋ: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಸೇರಿದಂತೆ 500 ಅಮೆರಿಕನ್ನರಿಗೆ ಪ್ರವೇಶವನ್ನು ನಿರ್ಬಂಧಿಸಿ ರಷ್ಯಾ ಆದೇಶ ಪ್ರಕಟಿಸಿದೆ.
ಜೋ ಬೈಡನ್ ಆಡಳಿತ ನಿರಂತರವಾಗಿ ರಷ್ಯಾದ ಮೇಲೆ ವಿಧಿಸುತ್ತಿರುವ ನಿರ್ಬಂಧಗಳಿಗೆ ಪ್ರತಿಯಾಗಿ ಅಮೆರಿಕದ 500 ಮಂದಿಗೆ ರಷ್ಯಾ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಉಕ್ರೇನ್ ಮೇಲೆ ದಾಳಿ ಮಾಡುತ್ತಿರುವ ರಷ್ಯಾವನ್ನು ಆರ್ಥಿಕವಾಗಿ ಕುಗ್ಗಿಸಲು ಅಮೆರಿಕ ಮತ್ತು ಯುರೋಪ್ ದೇಶಗಳು ನಾನಾ ಕ್ರಮಗಳನ್ನು ಜಾರಿ ಮಾಡುತ್ತಿವೆ. ಈ ಕ್ರಮದ ಭಾಗವಾಗಿ ಶುಕ್ರವಾರ ಅಮೆರಿಕ ರಷ್ಯಾದ ನೂರಕ್ಕೂ ಅಧಿಕ ಕಂಪನಿಗಳನ್ನು ವ್ಯಕ್ತಿಗಳನ್ನು ನಿರ್ಬಂಧ ಪಟ್ಟಿಗೆ ಸೇರಿಸಿದೆ. ಈ ಕ್ರಮಕ್ಕೆ ತಿರುಗೇಟು ಎನ್ನುವಂತೆ ರಷ್ಯಾ ಈಗ ಅಮೆರಿಕದ 500 ಮಂದಿಗೆ ನಿರ್ಬಂಧ ಹೇರಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.