



ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್ ದೃಢಪಟ್ಟ 5,676 ಪ್ರಕರಣಗಳು ಪತ್ತೆಯಾಗಿವೆ.
ಹಿಂದಿನ ದಿನಕ್ಕೆ ಹೋಲಿಸಿಕೊಂಡರೆ ಸೋಂಕು ಪ್ರಕರಣಗಳಲ್ಲಿ ತುಸು ಇಳಿಕೆಯಾಗಿದೆ. ಸೋಮವಾರ ದೇಶದಲ್ಲಿ 5,888 ಪ್ರಕರಣಗಳು ಪತ್ತೆಯಾಗಿದ್ದವು.
ಇನ್ನು ದೇಶದಲ್ಲಿ 37,093 ರಷ್ಟು ಸಕ್ರಿಯ ಕೋವಿಡ್ ಪ್ರಕರಣಗಳಿರುವುದು ಕೇಂದ್ರ ಆರೋಗ್ಯ ಇಲಾಖೆಯ ಅಂಕಿ ಅಂಶಗಳಿಂದ ಗೊತ್ತಾಗಿದೆ. ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ಸೋಮವಾರ ದೇಶದ ಹಲವು ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸನ್ನದ್ಧತೆಯನ್ನು ಪರಿಶೀಲಿಸಲು ಅಣಕು ಕಾರ್ಯಾಚರಣೆ ನಡೆಸಲಾಗಿತ್ತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.