



ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 5 ಮತ್ತು 8ನೇ ತರಗತಿ ಮೌಲ್ಯಂಕನ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಾ. 3ರಿಂದ 10ರ ವರೆಗೆ ಮೌಖೀಕ ಪರೀಕ್ಷೆಗಳನ್ನು ಮತ್ತು ಮಾ. 13ರಿಂದ 18ರ ವರೆಗೆ ಲಿಖೀತ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದೆ. ಮಾ. 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವುದರಿಂದ ಕೆಲವು ಪರೀûಾ ಕೇಂದ್ರಗಳಲ್ಲಿ ಮೌಲ್ಯಂಕನ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ಒಂದೇ ದಿನ ನಡೆಯಬೇಕಾಗಿದೆ. ಆದ್ದರಿಂದ 5 ಮತ್ತು 8ನೇ ತರಗತಿಗಳ ಮೌಲ್ಯಂಕನವನ್ನು ಅಪರಾಹ್ನ 2.30ರಿಂದ 4.30ರ ವರೆಗೆ ನಡೆಸುವಂತೆ ಸೂಚಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.