logo
WhatsApp Image 2026-04-02 at 14.46.04.jpeg
hindalco everlast.jpeg

ಗ್ರಾಮೀಣ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳಲ್ಲಿ ಶೇ.7.5 ಒಳಮೀಸಲಾತಿ

ಟ್ರೆಂಡಿಂಗ್
share whatsappshare facebookshare telegram
12 Oct 2026
post image

ಬೆಂಗಳೂರು: ರಾಜ್ಯದ ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮೆಡಿಕಲ್, ಇಂಜಿನಿಯರಿಂಗ್, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5ರಷ್ಟು ಒಳಮೀಸಲಾತಿ ಕಲ್ಪಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಈ ಸಂಬಂಧ ‘ಕರ್ನಾಟಕದ ಸರ್ಕಾರಿ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿನ ಸರ್ಕಾರಿ ಸೀಟುಗಳ ಪ್ರವೇಶಕ್ಕಾಗಿ ಅಭ್ಯರ್ಥಿಗಳ ಆಯ್ಕೆ (ತಿದ್ದುಪಡಿ) ನಿಯಮಗಳು, 2026’ರ ಅಂತಿಮ ಅಧಿಸೂಚನೆಯನ್ನು ಅಕ್ಟೋಬರ್ 8ರಂದು ರಾಜ್ಯ ಸರ್ಕಾರ ಪ್ರಕಟಿಸಿದೆ. ಸೆಪ್ಟೆಂಬರ್ 17ರಂದು ಕರಡು ಅಧಿಸೂಚನೆ ಹೊರಡಿಸಲಾಗಿದ್ದು, ಸಾರ್ವಜನಿಕರಿಂದ ಸ್ವೀಕರಿಸಿದ ಆಕ್ಷೇಪಣೆ ಮತ್ತು ಸಲಹೆಗಳನ್ನು ಪರಿಶೀಲಿಸಿದ ಬಳಿಕ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.

ಈಗಾಗಲೇ ಜಾರಿಯಲ್ಲಿರುವ ಶೇ.15ರಷ್ಟು ಗ್ರಾಮೀಣ ಮೀಸಲಾತಿಯೊಳಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5ರಷ್ಟು ಒಳಮೀಸಲಾತಿ ನೀಡಲಾಗುತ್ತದೆ. ಇದರಿಂದ ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಹೆಚ್ಚಿನ ಅವಕಾಶ ದೊರೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ನಿರ್ಧಾರವು ಮಾಜಿ ಮುಖ್ಯಮಂತ್ರಿ ಸಾರೇಕೊಪ್ಪ ಬಂಗಾರಪ್ಪ ಅವರ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ. ಗ್ರಾಮೀಣ ಯುವಕರು ಸರ್ಕಾರಿ ಉದ್ಯೋಗಗಳನ್ನು ಪಡೆದು ಆಡಳಿತ ವ್ಯವಸ್ಥೆಯ ಭಾಗವಾಗಬೇಕು ಎಂಬ ಉದ್ದೇಶದಿಂದ ತಮ್ಮ ಅಧಿಕಾರಾವಧಿಯಲ್ಲಿ ಬಂಗಾರಪ್ಪ ಅವರು ಗ್ರಾಮೀಣ ಅಭ್ಯರ್ಥಿಗಳಿಗೆ ‘ಗ್ರಾಮೀಣ ಗ್ರೇಸ್ ಅಂಕ’ ನೀಡುವ ನಿರ್ಧಾರ ಕೈಗೊಂಡಿದ್ದರು. ಬಳಿಕ ಗ್ರೇಸ್ ಅಂಕಗಳ ಬದಲಿಗೆ ಮೀಸಲಾತಿ ವ್ಯವಸ್ಥೆ ಜಾರಿಗೆ ಬಂದಿದ್ದು, ಇದೀಗ ಈ ವ್ಯವಸ್ಥೆಯನ್ನು ಉನ್ನತ ಶಿಕ್ಷಣ ಕ್ಷೇತ್ರಕ್ಕೂ ವಿಸ್ತರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.