logo
WhatsApp Image 2026-04-02 at 14.46.04.jpeg
hindalco everlast.jpeg

ದೇಶದಲ್ಲಿ ಒಂದೇ ದಿನಕ್ಕೆ 7,830 ಕೋವಿಡ್ ಕೇಸ್ ಪ್ರಕರಣ

ಟ್ರೆಂಡಿಂಗ್
share whatsappshare facebookshare telegram
12 Apr 2023
post image

ನವದೆಹಲಿ: ದೇಶದಲ್ಲಿ ಕಳೆದ ಏಳು ತಿಂಗಳಲ್ಲೇ ಗರಿಷ್ಠ ಕೋವಿಡ್ ಪ್ರಕರಣ ದಾಖಲಾಗಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 7,830 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 16 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಕಳೆದ ವರ್ಷ ಸೆಪ್ಟೆಂಬರ್ 1ರಂದು ದೇಶದಲ್ಲಿ 7,946 ಪ್ರಕರಣ ದಾಖಲಾಗಿತ್ತು. ಬರೋಬ್ಬರಿ 223 ದಿನಗಳ ಬಳಿಕ ಮತ್ತೆ ಗರಿಷ್ಠ ಕೋವಿಡ್ ಪ್ರಕರಣಗಳು ವರದಿಯಾಗಿವೆ.

ದೇಶದಲ್ಲಿ ಇದುವರೆಗೆ 4.47 ಕೋಟಿ ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 5,31,016 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಪ್ರಸ್ತುತ 40,215 ಸಕ್ರಿಯ ಪ್ರಕರಣಗಳಿವೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.