



ಬೆಂಗಳೂರು,: ಕರ್ನಾಟಕದಲ್ಲಿ ನಾಯಿ ಕಡಿತ (ಹುಚ್ಚು ನಾಯಿ ಕಡಿತ ಸೇರಿದಂತೆ) ಹಾಗೂ ರೇಬಿಸ್ ಪ್ರಕರಣಗಳು ಹೆಚ್ಚುತ್ತಿರುವುದು ಆರೋಗ್ಯ ಇಲಾಖೆಯ ಅಂಕಿ ಅಂಶಗಳಿಂದ ತಿಳಿದುಬಂದಿದ್ದು, ಕಳೆದ ಎರಡು ತಿಂಗಳುಗಳಲ್ಲಿ ರೇಬಿಸ್ ಸೋಂಕಿನಿಂದ ಎಂಟು ಮಂದಿ ಮೃತಪಟ್ಟಿದ್ದಾರೆ. ರೇಬಿಸ್ ಸೋಂಕಿನಿಂದ ಮೃತಪಟ್ಟ ನಾಲ್ಕು ಪ್ರಕರಣಗಳ ಪೈಕಿ ಮೂರು ಬೆಂಗಳೂರಿನಲ್ಲಿ ಸಂಭವಿಸಿದೆ.
ಹರಿಯಾಣ, ಚಿತ್ರದುರ್ಗ ಹಾಗೂ ತುಮಕೂರು ಮೂಲದ ವ್ಯಕ್ತಿಗಳು ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣದ ಸಮೀಪದ ಆಸ್ಪತ್ರೆಯೊಂದರಲ್ಲಿ (ಶಂಕಿತ ಲೇಬಿಸ್ ಪ್ರಕರಣಗಳಿಗೆ ಚಿಕಿತ್ಸೆ ನೀಡಲು ನಿಗದಿಪಡಿಸಿರುವ ಆಸ್ಪತ್ರೆ) ಈ ಸಾವುಗಳು ಸಂಭವಿಸಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇನ್ನೊಂದು ಸಾವು ಇಂದಿರಾ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಚೈಲ್ಡ್ ಹೆಲ್ತ್ ಆಸ್ಪತ್ರೆಯಲ್ಲಿ ಸಂಭವಿಸಿದೆ. ಅಲ್ಲಿ ನಾಲ್ಕು ವರ್ಷದ ಬಾಲಕ ಮೃತಪಟ್ಟಿದ್ದಾನೆ. 2025ರ ಫೆಬ್ರವರಿ ಅಂತ್ಯದ ವೇಳೆಗೆ ಕರ್ನಾಟಕದಲ್ಲಿ ಒಟ್ಟು 66489 ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ. ವಿಜಯಪುರದಲ್ಲಿ 4,552 ಮತ್ತು ಬೆಂಗಳೂರಿನಲ್ಲಿ 4072, ಹಾಸನದಲ್ಲಿ 3688 ಪ್ರಕರಣಗಳು ವರದಿಯಾಗಿವೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.