



ಮೈಸೂರು: ಬಿಟ್ ಕಾಯಿನ್ ನಲ್ಲಿ ಹಣ ಹೂಡಿಕೆ ಮಾಡಿ ಕೋಟಿ ಕೋಟಿ ಹಣ ಮಾಡಬೇಕೆಂಬ ಆಸೆಯಿಂದ ಮಧ್ಯವರ್ತಿಯ ಮಾತು ನಂಬಿ ಬರೋಬ್ಬರಿ 87 ಲಕ್ಷ ಹಣ ಕಳೆದುಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.
ಕೋಟಿ ಕೋಟಿ ಹಣ ಸಂಪಾದನೆ ಮಾಡಬೇಕೆಂಬ ಆಸೆಯಿಂದ ಮೈಸೂರಿನ ಇಬ್ಬರು ವ್ಯಕ್ತಿಗಳು ಲಕ್ಷ ಲಕ್ಷ ಹಣ ಕಳೆದುಕೊಂಡ ಎರಡು ಪ್ರತ್ಯೇಕ ಪ್ರಕರಣಗಳು ಬೆಳಕಿಗೆ ಬಂದಿದೆ. ಮೈಸೂರಿನ ಬೃಂದಾವನ ಬಡಾವಣೆಯ ನಿವಾಸಿ ವಿಜಯಲಕ್ಷ್ಮೀ ಕೂಡಿಟ್ಟಿದ್ದ ಅಲ್ಪ ಸ್ವಲ್ಪ ಹಣ ಜೊತೆಗೆ ಬ್ಯಾಂಕಿನಲ್ಲಿ ಸಾಲಮಾಡಿ ಬಿಟ್ ಕಾಯಿನ್ ನಲ್ಲಿ ಹಣ ಹೂಡಿಕೆ ಮಾಡಿದ್ದಾರೆ. ಮೊಹಮ್ಮದ್ ಜಾವೇದ್ ಕೂಡ ಬ್ಯಾಂಕ್ ನಲ್ಲಿ ಸಾಲ ಮಾಡಿ 35 ಲಕ್ಷ ಹಣವನ್ನು ಬಿಟ್ ಕಾಯಿನ್ ಹಾಗೂ ಕ್ರಿಪ್ಟೋ ಕರೆನ್ಸಿಗೆ ಹೂಡಿದ್ದಾರೆ.
ಇಬ್ಬರು ಕೂಡ ಟೆಲಿಗ್ರಾಂನಲ್ಲಿ ಬಂದ ಇನ್ವೇಟೇಷನ್ ಮೂಲಕ ಟ್ರೇಡರ್ಸ್ ಪರಿಚಯ ಮಾಡಿಕೊಂಡಿದ್ದಾರೆ. ಬಿಟ್ ಕಾಯಿನ್ ನಿಂದ ಸುಲಭವಾಗಿ ಹಣ ಗಳಿಸಬಹುದೆಂದು ನಂಬಿಕೆ ಬರುವ ರೀತಿ ಚಾಟ್ ಮಾಡಿದ್ದಾರೆ. ಜೊತೆಗೆ ಹಣ ಗಳಿಸಿದವರ ನಕಲಿ ಸ್ಕ್ರೀನ್ ಶಾಟ್ ಕಳುಹಿಸಿ ನಂಬಿಸಿದ್ದಾರೆ. ಆನ್ಲೈನ್ ವಂಚಕರ ಮಾತಿಗೆ ಮರುಳಾದ ಮೈಸೂರಿನ ಇಬ್ಬರು ಬರೋಬ್ಬರಿ 87 ಲಕ್ಷ ಹಣ ಕಳುಹಿಸಿ ಪಂಗನಾಮ ಹಾಕಿಸಿಕೊಂಡಿದ್ದಾರೆ. ಈ ಸಂಬಂಧ ಮೈಸೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.