



ಉಡುಪಿ :
ರಾಜ್ಯದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ ಎಂಬುದನ್ನು ಸರಕಾರ ಒಪ್ಪಿಕೊಂಡಿದೆ. ಅಸ್ಪೃಶ್ಯತೆ ನಿವಾರಣೆ ಮತ್ತು ಸಾಮರಸ್ಯ ಬೆಳೆಸುವ ನಿಟ್ಟಿನಲ್ಲಿ ವಿನಯ್ ಸಾಮರಸ್ಯ ಯೋಜನೆಯನ್ನು ಈ ತಿಂಗಳ ಅಂತ್ಯ ಅಥವಾ ಮುಂದಿನ ತಿಂಗಳ ಮೊದಲ ವಾರದಿಂದ ಶುರು ಮಾಡಲಿದ್ದೇವೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಧರ್ಮಸ್ಥಳದ ಧರ್ಮಾಧಿಕಾರಿ ಡಾ.
ಡಿ.ವೀರೇಂದ್ರ ಹೆಗ್ಗಡೆ ಸಹಿತವಾಗಿ ಧಾರ್ಮಿಕ ಮುಖಂಡರನ್ನು ಸೇರಿಸಿಕೊಂಡು ಅಸ್ಪೃಶ್ಯತೆ ನಿವಾರಿಸಲು ದೊಡ್ಡ ಅಭಿಯಾನ ನಡೆಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದ ಗ್ರಾಮ ಪಂಚಾಯಿತಿ ಮತ್ತು ಸ್ಥಳೀಯಾಡಳಿತಗಳಲ್ಲಿ ಸಾಮಾಜಿಕ ನ್ಯಾಯ ಸಮಿತಿ ಮೂಲಕ ಈ ಅಭಿಯಾನ ನಡೆಸಿ, ಅಸ್ಪೃಶ್ಯತೆ ಮುಕ್ತ ಗ್ರಾಮ, ನಗರಾಡಳಿತಗಳಿಗೆ ಇಲಾಖೆಯಿಂದ ಪ್ರೋತ್ಸಾಹ ನೀಡಲಾಗುವುದು ಎಂದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.