



ಉಡುಪಿ :ಮಹಾತ್ಮಗಾಂಧೀಜಿಯವರ ಜನ್ಮದಿನದ ಸ್ಮರಣಾರ್ಥವಾಗಿ ಅಕ್ಟೋಬರ್ 2 ರಂದು ಸ್ವಚ್ಛ ಭಾರತ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಸೆಪ್ಟಂಬರ್ 15 ರಿಂದ ಅಕ್ಟೋಬರ್ 2 ರ ವರೆಗೆ ಸ್ವಚ್ಛತಾ ಹೀ ಸೇವಾ ಎಂಬ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಸಲಾಗುತ್ತಿದೆ. ಇದರ ಅಂಗವಾಗಿ ಅಕ್ಟೋಬರ್ 1 ರಂದು ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಬೆಳಗ್ಗೆ 10 ಘಂಟೆಯಿAದ ಕನಿಷ್ಠ ಒಂದು ಘಂಟೆಗಳ ಕಾಲ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ https://swachhatahiseva.com ಪೋರ್ಟಲ್ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.