logo
WhatsApp Image 2026-04-02 at 14.46.04.jpeg
hindalco everlast.jpeg

ತ್ರಾಸಿ ಪೇಟೆಯ ಸೂಪರ್ ಮಾರ್ಕೆಟ್ ಬಳಿ ನಿಲ್ಲಿಸಿದ್ದ ಬೈಕ್ ಕಳವು

ಟ್ರೆಂಡಿಂಗ್
share whatsappshare facebookshare telegram
12 Aug 2022
post image

ಕುಂದಾಪುರದ ತ್ರಾಸಿ ಪೇಟೆಯಲ್ಲಿರುವ ಸೂಪರ್ ಮಾರ್ಕೆಟ್ ಅಂಗಡಿ ಬಳಿ ನಿಲ್ಲಿಸಿದ್ದ ಬೈಕ್ ನ್ನು ಕಳವು ಮಾಡಿರುವ ಬಗ್ಗೆ ಶೀರೂರು ಗ್ರಾಮದ ಮಹಮ್ಮದ್ ನಾಜೀಮ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ.

ಮಹಮ್ಮದ್ ನಾಜೀಮ್ ಅವರು ತ್ರಾಸಿ ಪೇಟೆಯಲ್ಲಿ ಸೂಪರ್ ಮಾರ್ಕೆಟ್ ಅಂಗಡಿ ಇಟ್ಟುಕೊಂಡು ವ್ಯವಹಾರ ಮಾಡಿಕೊಂಡಿದ್ದಾರೆ. ಎಂದಿನಂತೆ ತಮ್ಮ ಬೈಕ್ ನ್ನು ಮಾರ್ಕೆಟ್ ಅಂಗಡಿ ಬಳಿ ನಿಲ್ಲಿಸಿ ಮನೆಗೆ ಹೋಗಿದ್ದರು. ಮರುದಿನ ಬೆಳಿಗ್ಗೆ ಅಂಗಡಿಗೆ ಬಂದು ನೋಡಿದಾಗ ಬೈಕ್ ನಿಲ್ಲಿಸಿದ ಜಾಗದಲ್ಲಿ ಇರಲಿಲ್ಲ. ಯಾರೋ ಕಳ್ಳರು‌ ಬೈಕ್ ಅನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಕಳವಾದ ಬೈಕ್ ಮೌಲ್ಯ 40ಸಾವಿರ ರೂ. ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.