logo
WhatsApp Image 2026-04-02 at 14.46.04.jpeg
hindalco everlast.jpeg

ತ್ರಾಸಿ ಪೆಟ್ರೋಲ್ ಬಂಕ್ ನ ಬಳಿ ನಿಲ್ಲಿಸಿದ್ದ ಬೈಕ್ ಕಳ್ಳತನ

ಟ್ರೆಂಡಿಂಗ್
share whatsappshare facebookshare telegram
11 Aug 2022
post image

ಕುಂದಾಪುರ ತಾಲೂಕು ತ್ರಾಸಿ ಗ್ರಾಮದ ತ್ರಾಸಿ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ನ ಬಳಿ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಯಡ್ತರೆ ಗ್ರಾಮದ 32 ವರ್ಷದ ಪ್ರವೀಣ ಬೈಕ್ ಕಳೆದುಕೊಂಡ ವ್ಯಕ್ತಿ. ಇವರ ತಂದೆ ಅಸೌಖ್ಯದಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದು, ಹೀಗಾಗಿ ಆಸ್ಪತ್ರೆಗೆ ಹೋಗುವ ವೇಳೆ ತ್ರಾಸಿ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ನ ಬಳಿ ಬೈಕ್ ನಿಲ್ಲಿಸಿ, ಬೈಸ್ ನಲ್ಲಿ ಹೋಗಿದ್ದರು. ಮರುದಿನ ಬಂದು ನೋಡುವಾಗ ಬೈಕ್ ನಿಲ್ಲಿಸಿದ ಜಾಗದಲ್ಲಿ ಇರಲಿಲ್ಲ‌. ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದಾರೆ. ಕಳವಾದ ಬೈಕ್ ಮೌಲ್ಯ 35 ಸಾವಿರ ಆಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.