



ಭುವನೇಶ್ವರ್: ಒಡಿಶಾದ ಜಗತ್‍ಸಿಂಗ್‍ಪುರ ಜಿಲ್ಲೆಯ ಪರದೀಪ್ ಕರಾವಳಿಯಲ್ಲಿ ಮೈಕ್ರೋ ಕ್ಯಾಮೆರಾ ಅವಳವಡಿಸಿದ್ದ ಪಾರಿವಾಳವನ್ನು ಸೆರೆ ಹಿಡಿದಿದ್ದು, ಬೇಹುಗಾರಿಕೆಗೆ ಬಳಸಿರುವುದಾಗಿ ಎಂದು ಪೊಲೀಸರು ಶಂಕಿಸಿದ್ದಾರೆ.
ಒಡಿಶಾದ ಜಗತ್‍ಸಿಂಗ್‍ಪುರ ಜಿಲ್ಲೆಯ ಪರದೀಪ್ ಕರಾವಳಿಯಲ್ಲಿ ಮೀನುಗಾರರು ಕೆಲವು ದಿನಗಳ ಹಿಂದೆ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದರು. ಈ ವೇಳೆ ಆ ಮೀನುಗಾರರ ದೋಣಿಯ ಮೇಲೆ ಒಂದು ಪಾರಿವಾಳ ಕುಳಿತಿರುವುದನ್ನು ಮೀನುಗಾರರು ಗಮನಿಸಿದ್ದಾರೆ. ಅಷ್ಟೇ ಅಲ್ಲದೇ ಆ ಪಾರಿವಾಳದ ಕಾಲಿಗೆ ಮೈಕ್ರೊ ಕ್ಯಾಮೆರಾವನ್ನು ಬಳಸಿರುವುದನ್ನು ಗಮನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣ ಎಚ್ಚೆತ್ತುಕೊಂಡ ಮೀನುಗಾರರು ತಮ್ಮ ಟ್ರಾಲರ್‌ನಲ್ಲಿ ಪಾರಿವಾಳವನ್ನು ಸೆರೆ ಹಿಡಿದರು. ನಂತರ ಅದನ್ನು ಮೆರೈನ್ ಪೊಲೀಸರಿಗೆ ಒಪ್ಪಿಸಿದರು.
ಇದಾದ ಬಳಿಕ ತಕ್ಷಣ ಎಚ್ಚೆತ್ತುಕೊಂಡ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಈ ಬಗ್ಗೆ ಜಗತ್‍ಸಿಂಗ್‍ಪುರ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಪಿಆರ್ ಮಾತನಾಡಿ, ಪಶುವೈದ್ಯರು ಪಾರಿವಾಳವನ್ನು ಪರೀಕ್ಷಿಸುತ್ತಿದ್ದಾರೆ. ಅದರ ಕಾಲುಗಳಿಗೆ ಜೋಡಿಸಲಾದ ಸಾಧನಗಳನ್ನು ಪರೀಕ್ಷಿಸಲು ರಾಜ್ಯ ವಿಧಿವಿಜ್ಞಾನ ಪ್ರಯೋಗಾಯಲಯದ ಸಹಾಯವನ್ನು ಪಡೆಯುತ್ತೇವೆ ಎಂದು ತಿಳಿಸಿದರು.
ಪಾರಿವಾಳದ ರೆಕ್ಕೆಗೆಳ ಮೇಲೆ ಏನೋ ಬರೆಯಲಾಗಿದ್ದು, ಬೇರೆ ಭಾಷೆಯಲ್ಲಿದೆ. ಈ ಹಿನ್ನೆಲೆಯಲ್ಲಿ ಏನು ಬರೆಯಲಾಗಿದೆ ಎಂಬುದನ್ನು ಪತ್ತೆ ಹಚ್ಚಲು ತಜ್ಞರ ಸಹಾಯವನ್ನು ಪಡೆಯಲಾಗುವುದು ಎಂದು ಎಸ್ಪಿ ತಿಳಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.