



ಬಂಟ್ವಾಳ: ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ಸಂಭವಿಸಿದೆ.
ದ್ವಿಚಕ್ರ ವಾಹನ ಸವಾರ, ಪುತ್ತೂರು ನೆಹರುನಗರ ನಿವಾಸಿ, ನಿವೃತ್ತ ಸೈನಿಕ ಚಿದಾನಂದ್ ಕಾಮತ್ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮುಡಿಪು ಇನ್ಫೋಸಿಸ್ ಸಂಸ್ಥೆಯ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಅವಿವಾಹಿತನಾಗಿದ್ದು ತಾಯಿ ಜೊತೆ ವಾಸವಾಗಿದ್ದರು. ಮೃತರು ತಾಯಿ ಹಾಗೂ ಐವರು ಸಹೋದರರನ್ನು ಅಗಲಿದ್ದಾರೆ.
ಈ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.