logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಶಾಲೆಗೆ ತೆರಳುತಿದ್ದ ವಿದ್ಯಾರ್ಥಿಗಳಿಗೆ ಕಾರು ಢಿಕ್ಕಿ-ಮೂವರು ಸ್ಥಳದಲ್ಲೇ ಸಾವು

ರಾಜ್ಯ
share whatsappshare facebookshare telegram
28 Feb 2023
post image

ಚೆನ್ನೈ: ಶಾಲೆಗೆ ತೆರಳುತಿದ್ದ ವಿದ್ಯಾರ್ಥಿಗಳಿಗೆ ಕಾರು ಢಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಿರುಪತ್ತೂರ್ ನ ವಾಣಿಯಂಪಾಡಿನಲ್ಲಿ ಫೆ.28 ರಂದು ನಡೆದಿದೆ.

ಮಂಗಳವಾರ ಮುಂಜಾನೆ ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಸೈಕಲ್‌ ನಲ್ಲಿ ವಿದ್ಯಾರ್ಥಿಗಳು ಗುಂಪೊಂದು ಗಿರಿಸಮುಥಿರಂನಲ್ಲಿರುವ ಸರ್ಕಾರಿ ಶಾಲೆಗೆ ಹೋಗುತ್ತಿದ್ದರು. ಈ ವೇಳೆ ವೆಲ್ಲೂರಿನಿಂದ ಬೆಂಗಳೂರಿಗೆ ಕಡೆ ಹೋಗುತ್ತಿದ್ದ ಕಾರು ವೇಗವಾಗಿ ಬಂದು ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದು, ಮರಕ್ಕೆ ಗುದ್ದಿದೆ. ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ ಕಾರಣ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಘಟನೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದ ವಿಜಯ್(13), ರಫೀಕ್(13) ಮತ್ತು ಸೂರ್ಯ(13) ಎನ್ನುವ ವಿದ್ಯಾರ್ಥಿಗಳು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.