



ಬೆಂಗಳೂರು: ಕೊಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಯುವತಿಯೊಬ್ಬಳು ಸಿಗರೇಟ್ ಸೇದಿ ಆತಂಕ ಸೃಷ್ಟಿಸಿದ ಪ್ರಕರಣ ವರದಿಯಾಗಿದೆ. ಮಾರ್ಚ್ 5ರಂದು ರಾತ್ರಿ 9.50ಕ್ಕೆ ಕೊಲ್ಕತ್ತಾದಿಂದ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಈ ಘಟನೆ ಸಂಭವಿಸಿದೆ.
ಲ್ಯಾಂಡಿಂಗ್ ಗೆ ಅರ್ಧ ಗಂಟೆ ಇರುವಾಗ ಶೌಚಾಲಯಕ್ಕೆ ತೆರಳಿದ್ದ ಯುವತಿ ಅಲ್ಲಿ ಧೂಮಪಾನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಶೌಚಾಲಯದ ಬಾಗಿಲು ಓಪನ್ ಮಾಡಿದಾಗ ಅಲ್ಲಿ ಸಿಗರೇಟ್ ತುಂಡು ಪತ್ತೆಯಾಗಿತ್ತು. ತಕ್ಷಣ ನೀರು ಹಾಕಿ ನಂದಿಸಲಾಯಿತು.
ಬೆಂಗಳೂರಿನಲ್ಲಿ ವಿಮಾನ ಲ್ಯಾಂಡಿಂಗ್ ಆದ ಕೂಡಲೇ ಯುವತಿಯನ್ನು ಭದ್ರತಾ ಸಿಬ್ಬಂದಿಗೆ ಹಸ್ತಾಂತರಿಸಲಾಯಿತು. ಕೊಲ್ಕತ್ತಾ ಮೂಲದ ಪ್ರಿಯಾಂಕ ಎಂಬ ಯುವತಿ ಈ ರೀತಿ ವರ್ತಿಸಿದ್ದು, ಇದೀಗ ಆಕೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.