logo
WhatsApp Image 2026-04-02 at 14.46.04.jpeg
hindalco everlast.jpeg

ಬಿಜೂರು ಶಾಲೆಬಾಗಿಲು ಬಳಿ ದನ ಅಡ್ಡ ಬಂದು ರಸ್ತೆ ಬದಿಯ ಕಂದಕಕ್ಕೆ ಉರುಳಿಬಿದ್ದ ಸಿಮೆಂಟ್ ಲಾರಿ: ಚಾಲಕ ಸಹಿತ ನಾಲ್ವರು ಗಂಭೀರ

ಟ್ರೆಂಡಿಂಗ್
share whatsappshare facebookshare telegram
23 Aug 2022
post image

ಬೈಂದೂರು: ದನವೊಂದು‌ ಅಡ್ಡಬಂದ ಪರಿಣಾಮ ಸಿಮೆಂಟ್ ಸಾಗಾಟದ ಮಿನಿ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಮಗುಚಿಬಿದ್ದ ಘಟನೆ ಬೈಂದೂರು ಸಮೀಪದ ಬಿಜೂರು ಶಾಲೆಬಾಗಿಲು ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಘಟನೆಯಲ್ಲಿ ಚಾಲಕ ಸಹಿತ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಸಿಮೆಂಟ್ ತುಂಬಿದ ಲಾರಿ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಪ್ರಯಾಣಿಸುತ್ತಿತ್ತು. ಬಿಜೂರು ಶಾಲೆಬಾಗಿಲು ನಡುವೆ ಇದ್ದಕ್ಕಿದ್ದಂತೆ ದನವೊಂದು ಅಡ್ಡ ಬಂದಿದ್ದು, ಇದರಿಂದ ಚಾಲಕ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ರಸ್ತೆ ಬದಿಯ ಕಂದಕಕ್ಕೆ ಪಲ್ಟಿಯಾಗಿ ಬಿದ್ದಿದೆ. ಅಪಘಾತದ ಪರಿಣಾಮ ಸಿಮೆಂಟ್ ಚೀಲಗಳು ಚೆಲ್ಲಾಪಿಲ್ಲಿಯಾಗಿವೆ. ಘಟನೆಯಲ್ಲಿ ಲಾರಿಯಲ್ಲಿದ್ದ ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.