logo
WhatsApp Image 2026-04-02 at 14.46.04.jpeg
hindalco everlast.jpeg

ಆಟವಾಡುತ್ತಿದ್ದ ಮಗು ಆಸ್ಪತ್ರೆಯ ತೆರೆದ ನೀರಿನ ತೊಟ್ಟಿಗೆ ಬಿದ್ದು ಮೃತ್ಯು..!

ಟ್ರೆಂಡಿಂಗ್
share whatsappshare facebookshare telegram
16 Nov 2024
post image

ಶಿಕಾರಿಪುರ: ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿರುವ ತೆರೆದ ನೀರಿನ ತೊಟ್ಟಿಯಲ್ಲಿ ಶುಕ್ರವಾರ ಮೂರು ವರ್ಷದ ಮಗು ಬಿದ್ದು ಮೃತಪಟ್ಟಿದೆ.

ಮೃತಪಟ್ಟ ಮಗು ಮತ್ತಿಕೋಟೆ ಗ್ರಾಮದ ನಿವಾಸಿ ಇಮ್ರಾನ್ ಪುತ್ರ ಮೊಹಮದ್ ಅಯಾನ್(3).

ಇಮ್ರಾನ್ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತನ್ನ ಸಂಬಂಧಿಕರ ಆರೋಗ್ಯ ವಿಚಾರಿಸಲು ಮಗುವನ್ನು ಜೊತೆಯಲ್ಲಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ಸಂದರ್ಭದಲ್ಲಿ ಆಟವಾಡುತ್ತಾ ಆಸ್ಪತ್ರೆ ಹೊರಗಡೆ ಬಂದ ಮಗು ತೆರೆದ ನೀರಿನ ತೊಟ್ಟಿಯಲ್ಲಿ ಬಿದ್ದು ಮೃತ ಪಟ್ಟಿದೆ ಎಂದು ಅನುಮಾನಿಸಲಾಗಿದೆ. ಮಗು ಮೃತ ಪಟ್ಟ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ಮುಂದುವರಿಸಿದ್ದಾರೆ.

ವೈದ್ಯಾಧಿಕಾರಿಗಳ ವಿರುದ್ಧ ಕಠಿಣ ಕ್ರಮ:

ಮಗುವಿನ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಇದೇ ಸಂದರ್ಭದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ವಿವಿಧ ಸಂಘಟನೆ ಪದಾಧಿಕಾರಿಗಳು ಹಾಗೂ ಮೃತ ಮಗುವಿನ ಸಂಬಂಧಿಕರು ಪ್ರತಿಭಟನೆ ನಡೆಸಿದರು. ತೆರೆದ ನೀರಿನ ತೊಟ್ಟಿ ಇದ್ದರೂ ತೊಟ್ಟಿ ಮುಚ್ಚದೇ ವೈದ್ಯಾಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ನಿರ್ಲಕ್ಷ್ಯ ತೋರಿದ ಈ ವೈದ್ಯಾಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನೆ ನಡೆಸಿದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.