



ದೆಹಲಿ: ವಿಜಯ್ ಪಾರ್ಕ್ ಪ್ರದೇಶದಲ್ಲಿ ಐದು ಅಂತಸ್ತಿನ ಕಟ್ಟಡ ನೋಡು ನೋಡುತ್ತಲೇ ಕುಸಿದು ಬಿದ್ದಿದೆ. ಸ್ಥಳೀಯರು ಇದರ ವಿಡಿಯೋ ಮಾಡಿದ್ದು, ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಅಂತಸ್ತಿನ ಕಟ್ಟಡ ಕುಸಿದು ಬಿದ್ದ ತಕ್ಷಣ ಸ್ಥಳದಲ್ಲಿದ್ದ ಜನರು ಪ್ರಾಣ ಉಳಿಸಿಕೊಳ್ಳಲು ಅಕ್ಕಪಕ್ಕ ಓಡತೊಡಗುತ್ತಾರೆ. ಸಮೀಪದ ಮನೆಗಳು ಮತ್ತು ಅಂಗಡಿಗಳು ಹಾಗೂ ಕೆಲವು ವಾಹನಗಳಿಗೂ ಕೂಡ ಈ ಕುಸಿತದಿಂದ ಹಾನಿಯಾಗಿದೆ. . ಆದರೆ, ಈ ಅಪಘಾತದಿಂದ ಉಂಟಾದ ಹಾನಿಯ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ನೀಡಲಾಗಿಲ್ಲ.
ಅಪಘಾತದ ಮಾಹಿತಿ ತಿಳಿದ ತಕ್ಷಣ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದಾರೆ. ಘಟನೆ ನಡೆದ ಸ್ಥಳದ ಸುತ್ತಲಿನ ರಸ್ತೆಯನ್ನು ನಿರ್ಬಂಧಿಸಲಾಗಿದ್ದು, ಅಲ್ಲಿಂದ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.