logo
WhatsApp Image 2026-04-02 at 14.46.04.jpeg
hindalco everlast.jpeg

ಬಸ್ರೂರಿನಲ್ಲಿ ಮಲಗಿದ ಸ್ಥಿತಿಯಲ್ಲಿ‌ ವ್ಯಕ್ತಿಯ ಮೃತದೇಹ ಪತ್ತೆ

ಟ್ರೆಂಡಿಂಗ್
share whatsappshare facebookshare telegram
9 Aug 2022
post image

ಬಸ್ರೂರು: ಮಲಗಿದ ಸ್ಥಿತಿಯಲ್ಲೆ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕುಂದಾಪುರ ತಾಲೂಕು ಬಸ್ರೂರು ಗ್ರಾಮದ ಆ.8ರಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಅಂಪಾರು ಗ್ರಾಮದ ನೆಲ್ಲಿಕಟ್ಟೆ ನಿವಾಸಿ 48 ವರ್ಷದ ಸುರೇಶ ಪೂಜಾರಿ ಎಂದು ಗುರುತಿಸಲಾಗಿದೆ. ಇವರು ವಿಪರೀತ ಶರಾಬು ಸೇವಿಸುವ ಚಟ ಹೊಂದಿದ್ದು, ಇದರಿಂದಾಗಿ ಅನಾರೋಗ್ಯಕ್ಕೀಡಾಗಿದ್ದರು. ನಿನ್ನೆ ಮಧ್ಯಾಹ್ನ ಬಸ್ರೂರು ಗ್ರಾಮದ ಮಂಜುಶ್ರೀ ಫ್ಯಾಕ್ಟ್ರಿಗೆ ಹೋಗುವ ತಿರುವಿನ ಮಣ್ಣಿನ ರಸ್ತೆಯಲ್ಲಿ ಮಲಗಿದ ಸ್ಥಿತಿಯಲ್ಲಿ ಸುರೇಶ್ ಮೃತದೇಹ ಪತ್ತೆಯಾಗಿತ್ತು. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.