logo
WhatsApp Image 2026-04-02 at 14.46.04.jpeg
hindalco everlast.jpeg

ತ್ರಾಸಿಯಲ್ಲಿ ಪೆಟ್ರೋಲ್ ಬಂಕ್ ಮ್ಯಾನೇಜರ್ ನ ಗಮನ ಬೇರೆಡೆ ಸೆಳೆದು ಕ್ಯಾಶ್ ಡ್ರಾವರ್ ನಲ್ಲಿದ್ದ 52 ಸಾವಿರ ನಗದು ದೋಚಿಕೊಂಡು ವಿದೇಶಿ ವ್ಯಕ್ತಿ‌ ಪರಾರಿ

ಟ್ರೆಂಡಿಂಗ್
share whatsappshare facebookshare telegram
12 Aug 2022
post image

ಗಂಗೊಳ್ಳಿ:

ಮ್ಯಾನೇಜರ್‌ ನ ಗಮನ ಬೇರೆಡೆಗೆ ಸೆಳೆದು ಕ್ಯಾಶ್ ಡ್ರಾವರ್ ನಲ್ಲಿದ್ದ 52 ಸಾವಿರ ನಗದು ಕಳ್ಳತನ ಮಾಡಿರುವ ಘಟನೆ ಕುಂದಾಪುರ ತಾಲೂಕಿನ ತ್ರಾಸಿ ಸೌಪರ್ಣಿಕ ಹೆಚ್.ಪಿ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. ಪೆಟ್ರೋಲ್ ಬಂಕ್ ನ ಮ್ಯಾನೇಜರ್ ಮನೋಜ್ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಅಪರಿಚಿತ ವಿದೇಶಿ ವ್ಯಕ್ತಿಯೋರ್ವ ಪೆಟ್ರೋಲ್ ಬಂಕ್ ಗೆ ಬಂದಿದ್ದು, ಬಂಕ್ ನಲ್ಲಿ ತನ್ನ ಕಾರಿಗೆ 500 ರೂಪಾಯಿ ಡೀಸೆಲ್ ಹಾಕಿಸಿಕೊಂಡಿದ್ದಾನೆ. ಸಿಬ್ಬಂದಿಗೆ ಹಣ ಕೊಟ್ಟ ಬಳಿಕ, ಕ್ಯಾಶ್ ಕೌಂಟರ್ ಬಳಿ ಬಂದು ಮನೋಜ್ ಅವರ ಬಳಿ ಇಂಗ್ಲಿಷ್ ನಲ್ಲಿ ಮಾತನಾಡಿ 2 ಸಾವಿರ ರೂ.‌ನೋಟು ಇದೆಯಾ ಎಂದು ಕೇಳಿದ್ದಾನೆ. ಆಗ ಅವರು ಕ್ಯಾಶ್ ಡ್ರಾವರ್ ನಲ್ಲಿ ನೋಡಿ 1 ನೋಟು ಇದೆ ಎಂದು ಹೇಳಿದ್ದಾರೆ. ಆಗ ಅಪರಿಚಿತ ವ್ಯಕ್ತಿ ಡ್ರಾವರ್ ನಲ್ಲಿ ಬೇರೆ ನೋಟು ಇದೆಯೆಂದು ನೋಡಲು ಹೇಳಿ, ಮ್ಯಾನೇಜರ್ ನ ಗಮನ ಬೇರೆಡೆ ಸೆಳೆದು ಕ್ಯಾಶ್ ಡ್ರಾವರ್ ನಲ್ಲಿದ್ದ 52 ಸಾವಿರ ರೂ. ಹಣವನ್ನು ಕಳವು ಮಾಡಿಕೊಂಡು ಕಾರಿನಲ್ಲಿ ಪರಾರಿಯಾಗಿದ್ದಾನೆ.. ಈ ಬಗ್ಗೆ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. .

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.