logo
WhatsApp Image 2026-04-02 at 14.46.04.jpeg
hindalco everlast.jpeg

ಚಾಮರಾಜನಗರದಲ್ಲಿ ಪಾನೀಯ ಉತ್ಪಾದನಾ ಘಟಕ ಸ್ಥಾಪನೆಗೆ ಮುಂದಾದ ಶ್ರೀಲಂಕಾ ಮಾಜಿ ಕ್ರಿಕೆಟಿಗ

ಟ್ರೆಂಡಿಂಗ್
share whatsappshare facebookshare telegram
16 Aug 2023
post image

ಚಾಮರಾಜನಗರ: ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಅವರು ಚಾಮರಾಜನಗರದಲ್ಲಿ ಉದ್ಯಮವನ್ನು ಸ್ಥಾಪಿಸಲು ಸಜ್ಜಾಗಿದ್ದಾರೆ. ಇವರು 46 ಎಕರೆ ಭೂಮಿಯಲ್ಲಿ ಪಾನೀಯ ಉತ್ಪಾದನಾ ಘಟಕ ನಿರ್ಮಿಸುವ ಗುರಿ ಹೊಂದಿದ್ದಾರೆ. ಆ ಮೂಲಕ ಮೊದಲ ಹಂತದಲ್ಲಿ 800 ಕ್ಕೂ ಹೆಚ್ಚು ವ್ಯಕ್ತಿಗಳಿಗೆ ಉದ್ಯೋಗವಕಾಶವನ್ನು ಕಲ್ಪಿಸುತ್ತಿದ್ದಾರೆ.

ಕೆಲ್ಲಂಬಳ್ಳಿ ಇಂಡಸ್ಟ್ರಿಯಲ್ ಏರಿಯಾದ ಬದನಗುಪ್ಪೆಯಲ್ಲಿ ಎಂ/ಎಸ್ ಮುತ್ತಯ್ಯ ಬೆವರೇಜ್ ಅಂಡ್ ಕಾನ್ಪೆಕ್ಸನರಿ ಪ್ರೈವೇಟ್ ಲಿಮಿಟೆಡ್‌’ಗೆ ಕರ್ನಾಟಕ ಸರ್ಕಾರದಿಂದ ಭೂಮಿ ಮಂಜೂರಾಗಿದ್ದು, ಮುರಳೀಧರನ್ ಉದ್ಯಮದ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಿದ್ದಾರೆ. ಇದರಿಂದಾಗಿ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಕೈಗಾರಿಕಾ ಬೆಳವಣಿಗೆಯನ್ನು ವಿಸ್ತರಿಸಲಿದೆ.

ಮುತ್ತಯ್ಯ ಮುರಳೀಧರನ್ ಶ್ರೀಲಂಕಾದ ಸಿಲೋನ್ ಬೆವರೇಜ್ ಕ್ಯಾನ್ (ಪ್ರೈ) ಲಿಮಿಟೆಡ್‌ ನೊಂದಿಗೆ ತಂಪು ಪಾನೀಯ ಉತ್ಪಾದನೆಯ ಯೋಜನಾ ವರದಿಯನ್ನು ಸಲ್ಲಿಸಿದರು. ಇದಕ್ಕೆ ಕರ್ನಾಟಕ ಸರ್ಕಾರದಿಂದ ಅನುಮೋದನೆ ಸಿಕ್ಕಿದೆ. ಅಧಿಕಾರಿಗಳು ಸಹ 46.30 ಎಕರೆ ಗುತ್ತಿಗೆ ಮಂಜೂರು ಮಾಡಿದ್ದಾರೆ. 900 ಎಕರೆ ಕೈಗಾರಿಕಾ ಪ್ರದೇಶ ಹೊಂದಿರುವ ಬದನಗುಪ್ಪೆಯಲ್ಲಿ ಮುಂದಿನ ವರ್ಷ ಜೂನ್ ಅಥವಾ ಜುಲೈ ವೇಳೆಗೆ ಉತ್ಪಾದನೆ ಆರಂಭವಾಗುವ ನಿರೀಕ್ಷೆ ಇದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.