logo
WhatsApp Image 2026-04-02 at 14.46.04.jpeg
hindalco everlast.jpeg

ಯಡ್ತರೆ ಗ್ರಾಮದಲ್ಲಿ ಊರಿಗೆ ಬರುತ್ತಿದ್ದ ಹೋಟೆಲ್ ಉದ್ಯೋಗಿ ಕುಸಿದುಬಿದ್ದು ಸಾವು

ಟ್ರೆಂಡಿಂಗ್
share whatsappshare facebookshare telegram
10 Aug 2022
post image

ಬೈಂದೂರು:

ಕುಸಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಸ್ವಾಮಿ ಮೆಡಿಕಲ್ ಬಳಿ ಅ.9 ರಂದು ಬೆಳಕಿಗೆ ಬಂದಿದೆ. ಮೃತರನ್ನು ಬಿಜೂರು ಗ್ರಾಮದ ನಿವಾಸಿ 44ವರ್ಷದ ನಾಗರಾಜ ಎಂದು ಗುರುತಿಸಲಾಗಿದೆ. ಇವರು ಹುಬ್ಬಳಿಯಲ್ಲಿ ಹೋಟೆಲ್ ಕೆಲಸ ಮಾಡುತ್ತಿದ್ದರು. ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹುಬ್ಬಳಿಯಲ್ಲಿ ಕೆಲಸ ಮಾಡಲು ಆಗದೆ ಆ.8ರಂದು ಹುಬ್ಬಳಿಯಿಂದ ಹೊರಟಿದ್ದು, ಸಂಜೆ 6 ಗಂಟೆಗೆ ಮನೆಗೆ ಬರುವುದಾಗಿ ಮನೆಯವರಿಗೆ ಕರೆ ಮಾಡಿ ತಿಳಿಸಿದ್ದರು. ಬಳಿಕ ಮಧ್ಯರಾತ್ರಿ 1ಗಂಟೆಗೆ ಬೈಂದೂರು ಬಸ್ ನಿಲ್ದಾಣದಲ್ಲಿಇಳಿದು ಮನೆ ಕಡೆಗೆ ನಡೆದುಕೊಂಡು ಬರುವ ವೇಳೆ ಯಡ್ತರೆ ಗ್ರಾಮದ ಸ್ವಾಮಿ ಮೆಡಿಕಲ್ ಬಳಿ ಕುಸಿದು ಬಿದ್ದಿದ್ದು, ಬೈಂದೂರು ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ನಾಗರಾಜ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.