



ಕಾರ್ಕಳ : ಬೃಹತ್ ಗಾತ್ರ ಮರವೊಂದು ರಸ್ತೆಗೆ ಉರುಳಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಳ್ಮಣ್ ಪೇಟೆಯಲ್ಲಿ ನಡೆದಿದೆ.
ಪಿಲಾರು ನಿವಾಸಿ ಪ್ರವೀಣ್ 30 ವ. ಮೃತ ದುರ್ದೈವಿ.ಘಟನೆಯಲ್ಲಿ ಬೈಕ್ ಸವಾರ ಮರದಡಿಯಲ್ಲಿ ಸಿಲುಕಿಕೊಂಡಿದ್ದು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ. ಹಲವು ಗಂಟೆಗಳ ಕಾಲ ಕಾರ್ಕಳ ಪಡುಬಿದ್ರೆ ರಾಜ್ಯ ಹೆದ್ದಾರಿ ಸಂಪೂರ್ಣ ಬಂದ್ ಆಗಿತ್ತು. ಬಳಿಕ ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಮರವನ್ನು ತೆರವುಗೊಳಿಸುವ ಕಾರ್ಯ ಮಾಡಿದರು. ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.