



ಉಡುಪಿ : ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಅಕ್ಟೋಬರ್ 16 ರಂದು ಬೆಳಗ್ಗೆ 10 ಗಂಟೆಗೆ ಕಾಪು ತಾಲೂಕು ಆಡಳಿತ ಸೌಧದ ಸಭಾಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾಪು ತಾಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ಹಾಗೂ ಗ್ರಾಮಸ್ಥರು ತಮ್ಮ ಅಹವಾಲು ಅಥವಾ ಅರ್ಜಿಗಳನ್ನು ಕಾರ್ಯಕ್ರಮದಲ್ಲಿ ಸಲ್ಲಿಸಬಹುದಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.