



ಉಡುಪಿ:
ಚಾಲಕನ ನಿಯಂತ್ರಣ ತಪ್ಪಿದ ಸರಕು ಸಾಗಾಣಿಕೆಯ ಲಾರಿಯೊಂದು ರಸ್ತೆ ಬದಿಯ ಗುಂಡಿಗೆ ಬಿದ್ದ ಘಟನೆ ಮಣಿಪಾಲ ಬಳಿಯ ಕೆಳಪರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಲಾರಿಯು ಶಿವಮೊಗ್ಗದಿಂದ ಹಿರೇಬೆಟ್ಟುವಿಗೆ ಜೋಳ ತುಂಬಿಕೊಂಡು ಬರುತ್ತಿತ್ತು ಎನ್ನಲಾಗಿದೆ. ಕೆಳಪರ್ಕಳದಲ್ಲಿ ಬರುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ಕೊಡುವ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯಿಂದ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಕೆಳಪರ್ಕಳದಲ್ಲಿ ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದ ವಾಹನಗಳ ಸಂಚಾರಕ್ಕೆ ಸಾಕಷ್ಟು ತೊಂದರೆ ಆಗುತ್ತಿದೆ. ಈ ಹಿಂದೆಯೂ ಇದೇ ಸ್ಥಳದಲ್ಲಿ ಎರಡು ಲಾರಿಗಳು ಬಿದ್ದಿವೆ. ಅಲ್ಲದೆ, ಅವೈಜ್ಞಾನಿಕ ಕಾಮಗಾರಿಯಿಂದ ಕೆಳಪರ್ಕಳದಿಂದ ಪರ್ಕಳ ಪೇಟೆ ಮಾರ್ಗ ಮಧ್ಯೆ ಪದೇ ಪದೇ ವಾಹನಗಳು ಕೆಟ್ಟುನಿಲ್ಲುತ್ತಿದ್ದು, ಗಂಟೆಗಟ್ಟಲೇ ಸಂಚಾರ ದಟ್ಟಣೆ ಉಂಟಾಗುತ್ತಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.