logo
WhatsApp Image 2026-04-02 at 14.46.04.jpeg
hindalco everlast.jpeg

ಮೂರು ಆನೆಗಳ ಬಲಿ ಪಡೆದ ಲಾರಿ

ಟ್ರೆಂಡಿಂಗ್
share whatsappshare facebookshare telegram
15 Jun 2023
post image

ಪಲಮನೇರ್(ಆಂಧ್ರಪ್ರದೇಶ): ವೇಗವಾಗಿ ಬಂದ ಲಾರಿಯೊಂದು ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಮೂರು ಆನೆಗಳು ಸ್ಥಳದಲ್ಲೇ ಸಾವನ್ನಪಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ ಎಂದು ಅರಣ್ಯಾಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಚಿತ್ತೂರು ಜಿಲ್ಲೆಯ ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ ಬಳಿಯ ಜಗಮರ್ಲಾ ಕ್ರಾಸ್‌ನಲ್ಲಿ ಬುಧವಾರ ರಾತ್ರಿ ಈ ಅಪಘಾತ ಸಂಭವಿಸಿದೆ.

ಕುಡಿದ ಅಮಲಿನಲ್ಲಿ ಲಾರಿ ಓಡಿಸುತ್ತಿದ್ದ ಚಾಲಕ ಹೆದ್ದಾರಿ ದಾಟುತ್ತಿದ್ದ ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದ ರಭಸಕ್ಕೆ ಒಂದು ಹೆಣ್ಣು ಹಾಗೂ ಎರಡು ಗಂಡು ಆನೆಗಳು ಸ್ಥಳದಲ್ಲೇ ಮೃತಪಟ್ಟಿವೆ.

ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದಾನೆ. ಆತನಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ ಎಂದು ಎಂದು ಅರಣ್ಯಾಧಿಕಾರಿ ಚೈತನ್ಯ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.