logo
WhatsApp Image 2026-04-02 at 14.46.04.jpeg
hindalco everlast.jpeg

ಹೊಸಾಳ ಗ್ರಾಮದಲ್ಲಿ ಮುಂಬೈನಿಂದ ಊರಿಗೆ ಬಂದಿದ್ದ ವ್ಯಕ್ತಿ‌ ನೇಣಿಗೆ ಶರಣು

ಟ್ರೆಂಡಿಂಗ್
share whatsappshare facebookshare telegram
20 Jul 2022
post image

ಬ್ರಹ್ಮಾವರ: ಕಳೆದ ಒಂದು ತಿಂಗಳ ಹಿಂದೆ ಮುಂಬೈನಿಂದ ಊರಿಗೆ ಬಂದಿದ್ದ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಬಾರ್ಕೂರು ಹೊಸಾಳ ಗ್ರಾಮದ ಹೊಸಮನೆ ಎಂಬಲ್ಲಿ ಜುಲೈ 19ರಂದು ಸಂಜೆ 6.45ಕ್ಕೆ ನಡೆದಿದೆ. ಹೊಸಾಳ ಗ್ರಾಮದ ಹೊಸಮನೆ ನಿವಾಸಿ 58ವರ್ಷದ ಚಂದ್ರಶೇಖರ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಹೆಂಡತಿ ಮಕ್ಕಳೊಂದಿಗೆ ಮುಂಬಯಿಯಲ್ಲಿ ವಾಸವಾಗಿದ್ದರು. ಕಳೆದ ಒಂದು ತಿಂಗಳ ಹಿಂದೆ ಊರಿಗೆ ಬಂದಿದ್ದರು. ಚಂದ್ರಶೇಖರ ಶೆಟ್ಟಿ ಒಂದು ವರ್ಷದಿಂದ ಕಣ್ಣಿನ ದೃಷ್ಟಿ ಸಮಸ್ಯೆಯಿಂದ ಬಳಲುತ್ತಿದ್ದರು‌‌. ಇದೇ ಚಿಂತೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ನಿನ್ನೆ ಸಂಜೆ ಮನೆಯ ಹೊರಗಿನ ಸೀಟ್ ಮಾಡಿಗೆ ನೇಣುಬಿಗಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.