logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಉಡುಪಿ ಜಿಲ್ಲೆಯ ವ್ಯಾಪ್ತಿಯ ಮರಳು, ಕೆಂಪುಕಲ್ಲಿನ ಗಣಿಗಾರಿಕೆ ಕುರಿತು ಸಿಎಂ ಅಧ್ಯಕ್ಷತೆಯಲ್ಲಿ ಸಭೆ

ಟ್ರೆಂಡಿಂಗ್
share whatsappshare facebookshare telegram
6 Oct 2023
post image

ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶವಿಲ್ಲ - ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅ.05: ರ್ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಕೆಂಪು ಕಲ್ಲು ಹಾಗೂ ಮಣ್ಣಿನ ವಿಚಾರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಕೂಡದು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಮರಳು, ಕೆಂಪುಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯ ಪರಿಸರ ಪ್ರಭಾವ ಮೌಲ್ಯ ಮಾಪನ ಪ್ರಾಧಿಕಾರ ಅನುಮತಿ ನೀಡಿದ ಬಳಿಕವೇ ಮರಳು ಬ್ಲಾಕ್ ಗಳಿಗೆ ಅನುಮತಿ ಪತ್ರ ದೊರೆಯುತ್ತದೆ. ಪ್ರಾಧಿಕಾರದ ತಿಂಗಳಿಗೊಮ್ಮೆ ಸಭೆ ನಡೆಯುವುದರಿಂದ ವಿಳಂಬವಾಗುತ್ತಿದೆ. ಈ ಪ್ರಕ್ರಿಯೆಗೆ ವೇಗ ನೀಡಬೇಕೆಂದು ಮುಖ್ಯ ಮಂತ್ರಿಗಳು ಪ್ರಾಧಿಕಾರದ ಆಯುಕ್ತರಿಗೆ ಸೂಚಿಸಿದರು.

ಹೊಸ ಮರಳು ನೀತಿ 2020 ನ್ನು 1.12.2021 ರಂದು ಜಾರಿಗೆ ತಂದಿದ್ದು, ಸಣ್ಣ ಬ್ಲಾಕ್ ಗಳಿವೆ. ಕಟ್ಟಡ ನಿರ್ಮಾಣ ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರ ಜೊತೆಗೆ ಸಾಂಪ್ರದಾಯಿಕವಾಗಿ ಮರಳು ತೆಗೆಯುವವರ ಹಿತಾಸಕ್ತಿ ಯನ್ನೂ ಕಾಪಾಡಬೇಕಿದೆ . ಕಾರ್ಮಿಕರಿಗೆ ಸಮಸ್ಯೆಯಾಗದಂತೆ ತೀರ್ಮಾನ ತೆಗೆದುಕೊಳ್ಳಬೇಕೆಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ತಿಳಿಸಿದರು.

Non CRZ ಪ್ರದೇಶದಲ್ಲಿ ಟೆಂಡರ್ ಕಂ ಹರಾಜು ಮೂಲಕ ಗುತ್ತಿಗೆ ಮಂಜೂರು ಮಾಡಲು 39 ಮರಳು ಬ್ಲಾಕ್ ಗಳನ್ನು ಗುರುತಿಸಲಾಗಿದೆ. ಈ ಪೈಕಿ 9 ಬ್ಲಾಕ್ ಗಳ ಟೆಂಡರ್ ಪ್ರಕ್ರಿಯೆ ಯಶಸ್ವಿಯಾಗಿದ್ದು, 30 ಮರಳು ಬ್ಲಾಕ್ ಗಳಿಗ ಮರುಹಾರಾಜು ಪ್ರಕ್ರಿಯೆ ಶೀಘ್ರ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸಭೆಗೆ ಮಾಹಿತಿ ಒದಗಿಸಿದರು.

8 ಲಕ್ಷ ಟನ್ ಮರಳು ಅಗತ್ಯವಿದೆ. ಜೆಲ್ಲಿ, ಕೆಂಪುಕಲ್ಲಿನ ಸಮಸ್ಯೆ ಇದೆ.

ಮಂಗಳೂರು, ಉಡುಪಿಯಲ್ಲಿನ ಹವಾಗುಣಕ್ಕಾಗಿ ಗೃಹನಿರ್ಮಾಣಕ್ಕೆ ಬಳಕೆಯಾಗುತ್ತದೆ. ಇದರಲ್ಲಿ ಬಾಕ್ಸೈಟ್ ಇದೆ ಎಂಬ ಕಾರಣಕ್ಕೆ ಕೈಗಾರಿಕೆಗಳು ಇದನ್ನು ಬಳಸುತ್ತವೆ. ಜಿಲ್ಲೆಯಿಂದ ಹೊರಗೆ ಕಳಿಸುವುದು ಬೇಡ ಎಂಬ ಅಭಿಪ್ರಾಯ ಜನರಲ್ಲಿದೆ.

ಮರಳು ಗಣಿಗಾರಿಕೆಗೆ ಪರವಾನಗಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಪರವಾನಗಿ ನೀಡಲಿ. ಮನೆ ಕಟ್ಟಲು ಅಗತ್ಯವಿರುವ ಸೈಜುಗಲ್ಲುಗಳಿಗೆ ಗಣಿಗಾರಿಕೆ ಮಾಡಲು ಕಾಯ್ದೆಯ ಸರಳೀಕರಣ ಮಾಡಿ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಬೇಕು ಎಂದು ಸಭೆಯಲ್ಲಿ ಮನವಿ ಮಾಡಲಾಯಿತು.

ಕೆಂಪುಕಲ್ಲಿನ( Laterite) ಗಣಿಗಾರಿಕೆ ಗೆ 71 ಕಾರ್ಯಾದೇಶಗಳನ್ನು ಒಂದು ವರ್ಷದ ಅವಧಿಗೆ ನೀಡಲಾಗಿದೆ. ಖನಿಜವನ್ನು ಬಾಕ್ಸೈಟ್ ಆಗಿ ವಿಂಗಡಿಸಿರುವುದರಿಂದ 17.03.2023 ರಂದು ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಗಳು 1994 ಗೆ ತಿದ್ದುಪಡಿ ತಂದು ತಿದ್ದುಪಡಿ ನಿಯಮ 2023 ಜಾರಿಗೊಳಿಸಲಾಗಿದೆ. ಹೀಗಾಗಿ ಲ್ಯಾಟರೈಟ್ ಖನಿಜಕ್ಕೆ ಕಾರ್ಯಾದೇಶ ನೀಡುವುದನ್ನು ಕೈಬಿಡಲಾಗಿದೆ ಎಂದು ಸಭೆಯ ಗಮನಕ್ಕೆ ತರಲಾಯಿತು.

ಸ್ಥಳೀಯ ಜಿಲ್ಲೆಗೆ ಅಗತ್ಯವಿರುವಂತೆ ಕಾಯ್ದೆಗೆ ತಿದ್ದುಪಡಿ ಮಾಡಬಹುದು. Laterite ಸಂಬಂಧಿಸಿದಂತೆ ಹಿಂದಿನ ಸರ್ಕಾರ ಮಾಡಲಾಗಿರುವ ತಿದ್ದುಪಡಿಯನ್ನು ಪುನಃ ತಿದ್ದುಪಡಿ ಮಾಡಿ ವಾಹನಗಳಿಗೆ ಅನುಮತಿ ನೀಡಬಹುದು. ಕ್ರಶಿಂಗ್ ಮಾಡಲಾದ ಮಣ್ಣನ್ನು ಜಿಲ್ಲೆಯೊಳಗಿನ ಬಳಕೆಗೆ ಮಾತ್ರ ಸೀಮಿತಗೊಳಿಸಬೇಕು ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು.

ಜಿಲ್ಲಾ ಆಸ್ಪತ್ರೆಯಲ್ಲಿ 9 ಡಯಾಲಿಸಿಸ್ ಯಂತ್ರಗಳು ಕೆಟ್ಟಿದೆ. ಒಂದೇ ಯಂತ್ರ ಕಾರ್ಯನಿರ್ವಹಿಸುತ್ತಿದೆ. ಅಲ್ಲಿನ ಸಿಬ್ಬಂದಿಗೆ 6 ತಿಂಗಳಿನಿಂದ ವೇತನ ಪಾವತಿಯಾಗಿಲ್ಲ. ಕೂಡಲೇ ವೇತನ ನೀಡುವಂತೆ ಸಿಎಂ ಸೂಚಿಸಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್, ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಸಚಿವರಾದ ಎಚ್.ಸಿ. ಮಹದೇವಪ್ಪ, ಚಲುವರಾಯಸ್ವಾಮಿ, ಬಿ.ನಾಗೇಂದ್ರ, ಹಿಂದುಳಿದ ವರ್ಗಗಳ ಆಯೋಗದ ಜಯಪ್ರಕಾಶ್ ಹೆಗ್ಡೆ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳಿ, ವಿಧಾನ ಪರಿಷತ್ ಸದಸ್ಯರಾದ ಕೋಟಾ ಶ್ರೀನಿವಾಸ ಪೂಜಾರಿ, ಮಂಜುನಾಥ್ ಭಂಡಾರಿ, ಮಾಜಿ‌ ಸಚಿವ ವಿನಯ್ ಕುಮಾರ್ ಸೊರಕೆ, ಮುಖಂಡರಾದ ಗೋಪಲ್ ಪೂಜಾರಿ, ಪ್ರಸಾದ್ ಕಾಂಚನ್, ಉದಯ್ ಕುಮಾರ್ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಲಿ, ಎಂ.ಎ.ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾದ ಗಿರೀಶ್, ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ ಹಾಜರಿದ್ದರು. ಸಭೆಯಲ್ಲಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್, ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಸಚಿವರಾದ ಎಚ್.ಸಿ. ಮಹದೇವಪ್ಪ, ಚಲುವರಾಯಸ್ವಾಮಿ, ಬಿ.ನಾಗೇಂದ್ರ, ಹಿಂದುಳಿದ ವರ್ಗಗಳ ಆಯೋಗದ ಜಯಪ್ರಕಾಶ್ ಹೆಗ್ಡೆ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳಿ, ವಿಧಾನ ಪರಿಷತ್ ಸದಸ್ಯರಾದ ಕೋಟಾ ಶ್ರೀನಿವಾಸ ಪೂಜಾರಿ, ಮಂಜುನಾಥ್ ಭಂಡಾರಿ, ಮಾಜಿ‌ ಸಚಿವ ವಿನಯ್ ಕುಮಾರ್ ಸೊರಕೆ, ಮುಖಂಡರಾದ ಗೋಪಲ್ ಪೂಜಾರಿ, ಪ್ರಸಾದ್ ಕಾಂಚನ್, ಉದಯ್ ಕುಮಾರ್ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಲಿ, ಎಂ.ಎ.ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾದ ಗಿರೀಶ್, ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ ಹಾಜರಿದ್ದರು.ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್, ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಸಚಿವರಾದ ಎಚ್.ಸಿ. ಮಹದೇವಪ್ಪ, ಚಲುವರಾಯಸ್ವಾಮಿ, ಬಿ.ನಾಗೇಂದ್ರ, ಹಿಂದುಳಿದ ವರ್ಗಗಳ ಆಯೋಗದ ಜಯಪ್ರಕಾಶ್ ಹೆಗ್ಡೆ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳಿ, ವಿಧಾನ ಪರಿಷತ್ ಸದಸ್ಯರಾದ ಕೋಟಾ ಶ್ರೀನಿವಾಸ ಪೂಜಾರಿ, ಮಂಜುನಾಥ್ ಭಂಡಾರಿ, ಮಾಜಿ‌ ಸಚಿವ ವಿನಯ್ ಕುಮಾರ್ ಸೊರಕೆ, ಮುಖಂಡರಾದ ಗೋಪಲ್ ಪೂಜಾರಿ, ಪ್ರಸಾದ್ ಕಾಂಚನ್, ಉದಯ್ ಕುಮಾರ್ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಲಿ, ಎಂ.ಎ.ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾದ ಗಿರೀಶ್, ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ ಹಾಜರಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.