



ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣವೊಂದು ನಡೆದಿರುವುದು ಬೆಳಕಿಗೆ ಬಂದಿದೆ. ಬಸ್ಸಿನಲ್ಲಿ ಯುವತಿಯ ಜತೆ ಮಾತನಾಡಿದ್ದಕ್ಕೆ ಅನ್ಯಕೋಮಿನ ಯುವಕನ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ಈ ಘಟನೆ ನಡೆದಿದ್ದು, ಕಕ್ಕಿಂಜೆ ನಿವಾಸಿ ಝಾಹಿರ್ (22) ಹಲ್ಲೆಗೊಳಗಾದ ಯುವಕನಾಗಿದ್ದಾನೆ.
ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಝಾಹಿರ್, ಮಂಗಳವಾರ ಊರಿಗೆ ಬಸ್ಸಿನಲ್ಲಿ ಬರುತ್ತಿದ್ದ ವೇಳೆ ಪರಿಚಯದ ಯುವತಿಯೊಂದಿಗೆ ಮಾತನಾಡಿದ್ದನು. ಯುವತಿ ಬೆಳ್ತಂಗಡಿಯಲ್ಲಿ ಬಸ್‍ನಿಂದು ಇಳಿದು ಹೋಗಿದ್ದಾಳೆ. ಇತ್ತ ಯುವಕರ ತಂಡ ಝಾಹಿರ್‍ಗಾಗಿ ಉಜಿರೆಯಲ್ಲಿ ಕಾದು ಕುಳಿತು ಹಲ್ಲೆ ನಡೆಸಿದೆ. ಉಜಿರೆಯಲ್ಲಿ ಬಸ್ ನಿಂದ ಕಳಗಿಳಿಸಿ ಝಾಹಿರ್ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ.
ಘಟನೆ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.