logo
WhatsApp Image 2026-04-02 at 14.46.04.jpeg
hindalco everlast.jpeg

ಬ್ರಹ್ಮಾವರದ ಕುದಿಗ್ರಾಮದಲ್ಲಿ ಕುಸಿದುಬಿದ್ದು ವ್ಯಕ್ತಿ ಸಾವು

ಟ್ರೆಂಡಿಂಗ್
share whatsappshare facebookshare telegram
15 Aug 2022
post image

ಬ್ರಹ್ಮಾವರ: ವ್ಯಕ್ತಿಯೊಬ್ಬರು ಕುಸಿದುಬಿದ್ದು ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ 34ನೇ ಕುದಿ ಗ್ರಾಮದ ಬಳೆಗಾರಬೆಟ್ಟು ಎಂಬಲ್ಲಿ ಇಂದು ನಡೆದಿದೆ. ಬಳೆಗಾರಬೆಟ್ಟು ನಿವಾಸಿ 45ವರ್ಷದ ಸಂತೋಷ್‌ ಜೋಗಿ ಮೃತದುರ್ದೈವಿ. ಇವರು ಇಂದು ಬೆಳಿಗ್ಗೆ ಬೈದ್‌ಬೆಟ್ಟುನಲ್ಲಿ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಬಂದಿದ್ದರು. ಮಧ್ಯಾಹ್ನ 12ಗಂಟೆ ಸುಮಾರಿಗೆ ಮನೆಯಲ್ಲಿ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಬ್ರಹ್ಮಾವರ ಮಹೇಶ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು ಸಂತೋಷ್‌ ಜೋಗಿ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಸಂತೋಷ್ ಅವರು ಹೃದಯಾಘಾತ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.